ಭಾರತ – ಬಾಂಗ್ಲಾ ಟೆಸ್ಟ್ ಸರಣಿಯ ಮೊದಲ ಪಂದ್ಯ ಆರಂಭ
ಚೆನ್ನೈ,19 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯ ಇಂದು ಸೆಪ್ಟೆಂಬರ್ 19 ರಿಂದ ಆರಂಭವಾಗಲಿದೆ. ಇದುವರೆಗೆ ಎರಡೂ ತಂಡಗಳು 13 ಬಾರಿ ಮುಖಾಮುಖಿಯಾಗಿದ್ದು, ಇದರಲ್ಲಿ ಭಾರತ 11 ಪಂದ್ಯಗಳನ್ನು ಗೆದ್ದಿದ್ದರೆ, ಎರಡು ಪಂದ್ಯಗಳು ಡ್ರಾ ಆಗಿವೆ. ಇದೀ
ಚೆನ್ನೈ


ಚೆನ್ನೈ,19 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯ ಇಂದು ಸೆಪ್ಟೆಂಬರ್ 19 ರಿಂದ ಆರಂಭವಾಗಲಿದೆ. ಇದುವರೆಗೆ ಎರಡೂ ತಂಡಗಳು 13 ಬಾರಿ ಮುಖಾಮುಖಿಯಾಗಿದ್ದು, ಇದರಲ್ಲಿ ಭಾರತ 11 ಪಂದ್ಯಗಳನ್ನು ಗೆದ್ದಿದ್ದರೆ, ಎರಡು ಪಂದ್ಯಗಳು ಡ್ರಾ ಆಗಿವೆ. ಇದೀಗ ಉಭಯ ದೇಶಗಳ ನಡುವಿನ 14ನೇ ಟೆಸ್ಟ್ ಪಂದ್ಯ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ಅರ್ಹತೆ ಪಡೆಯಲು ಎರಡೂ ತಂಡಗಳಿಗೆ ಈ ಸರಣಿ ನಿರ್ಣಾಯಕವಾಗಿದೆ. ಇತ್ತೀಚೆಗಷ್ಟೇ ಬಾಂಗ್ಲಾದೇಶ ತಂಡ ಪಾಕಿಸ್ತಾನವನ್ನು ಅವರ ನೆಲದಲ್ಲೇ ಗೆದ್ದು ಬೀಗಿದರಿಂದ ಆತ್ಮವಿಶ್ವಾಸದಿಂದ ಬೀಗುತ್ತಿದೆ. ಇತ್ತ ಟೆಸ್ಟ್ ಸರಣಿಯಲ್ಲಿ ಬಾಂಗ್ಲಾದೇಶ ವಿರುದ್ಧ ಅಜೇಯವಾಗಿರುವ ಭಾರತಕ್ಕೆ ಮತ್ತೊಂದು ಸರಣಿಯನ್ನು ಕೈವಶ ಮಾಡಿಕೊಳ್ಳುವ ಅವಕಾಶ ಸಿಕ್ಕಿದೆ.

ಮೊದಲ ಟೆಸ್ಟ್ ಪಂದ್ಯಕ್ಕೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ ಜುರೆಲ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ ಮತ್ತು ಯಶ್ ದಯಾಳ್.

ಟೆಸ್ಟ್ ಸರಣಿಗೆ ಬಾಂಗ್ಲಾದೇಶ ತಂಡ: ನಜ್ಮುಲ್ ಹುಸೇನ್ ಶಾಂಟೊ (ನಾಯಕ), ಜಾಕಿರ್ ಹಸನ್, ಮೊಮಿನುಲ್ ಹಕ್, ಮುಶ್ಫಿಕರ್ ರಹೀಮ್, ಶಾದ್ಮನ್ ಇಸ್ಲಾಂ, ಶಕೀಬ್ ಅಲ್ ಹಸನ್, ಮೆಹದಿ ಹಸನ್ ಮಿರಾಜ್, ಝಾಕರ್ ಅಲಿ ಅನಿಕ್, ತಸ್ಕಿನ್ ಅಹ್ಮದ್, ಲಿಟನ್ ದಾಸ್, ಹಸನ್ ಮಹಮೂದ್, ತೈಜುಲ್ ಇಸ್ಲಾಂ, ಮಹ್ಮುದುಲ್ ಹಸನ್ ಜಾಯ್, ನಹಿದ್ ರಾಣಾ, ಖಾಲಿದ್ ಅಹ್ಮದ್.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande