ಕೊಪ್ಪಳ, 02 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಕ್ರೀಡೆಯಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ಜಿಲ್ಲೆಯ ಕ್ರೀಡಾಪಟುಗಳಿಗೆ 2023ನೇ ಸಾಲಿನ ಏಕಲವ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದ್ದು, ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ಜಿಲ್ಲೆಯ ಪ್ರತಿಭಾನ್ವಿತ ಕ್ರೀಡಾಪಟುಗಳಿಂದ ಏಕಲವ್ಯ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅರ್ಹ ಕ್ರೀಡಾಪಟುಗಳು ನಿಗದಿತ ಅರ್ಜಿ ನಮೂನೆಗಳನ್ನು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಪ್ಪಳ ಇವರಲ್ಲಿ ಪಡೆದು ಭರ್ತಿ ಮಾಡಿ, ಸೆಪ್ಟೆಂಬರ್ 10 ರೊಳಗೆ ಈ ಕಚೇರಿಗೆ ಸಲ್ಲಿಸಬೇಕು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್