ಒಂದೇ ಕುಟುಂಬದ ಐವರು ಕಾರಿನಲ್ಲಿ ಶವವಾಗಿ ಪತ್ತೆ – ಆತ್ಮಹತ್ಯೆ ಶಂಕೆ
ಚೆನ್ನೈ, 26 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಒಂದೇ ಕುಟುಂಬದ ಐವರು ಕಾರಿನಲ್ಲಿ ಶವವಾಗಿ ಪತ್ತೆಯಾದ ಘಟನೆ ತಮಿಳುನಾಡಿನ ಪುದುಕೊಟ್ಟೈನಲ್ಲಿ ನಡೆದಿದೆ. ನಿನ್ನೆ ಬೆಳಗ್ಗೆ ತಿರುಚ್ಚಿ-ಕಾರೈಕುಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ನಿಂತಿತ್ತು. ಇಂದು ಬೆಳಿಗ್ಗೆ ಅದೇ ಸ್ಥಳದಲ್ಲಿ ಕಾರು ನಿಂತಿರುವುದನ್ನು
/family-of-5-found-dead-in-car-in-tamil-nadu-cops-


ಚೆನ್ನೈ, 26 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಒಂದೇ ಕುಟುಂಬದ ಐವರು ಕಾರಿನಲ್ಲಿ ಶವವಾಗಿ ಪತ್ತೆಯಾದ ಘಟನೆ ತಮಿಳುನಾಡಿನ ಪುದುಕೊಟ್ಟೈನಲ್ಲಿ ನಡೆದಿದೆ.

ನಿನ್ನೆ ಬೆಳಗ್ಗೆ ತಿರುಚ್ಚಿ-ಕಾರೈಕುಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ನಿಂತಿತ್ತು. ಇಂದು ಬೆಳಿಗ್ಗೆ ಅದೇ ಸ್ಥಳದಲ್ಲಿ ಕಾರು ನಿಂತಿರುವುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರೀಶಿಲಿಸಿದಾಗ ಕಾರಿನೊಳಗೆ ಐವರು ಮೃತಪಟ್ಟಿರುವುದು ಕಂಡು ಬಂದಿದೆ.

ಮೃತರನ್ನು ಉದ್ಯಮಿ ಮಣಿಕಂದನ್ (50), ಅವರ ಪತ್ನಿ ನಿತ್ಯ, ತಾಯಿ ಸರೋಜಾ ಮತ್ತು ಅವರ ಇಬ್ಬರು ಮಕ್ಕಳು ಎಂದು ಗುರುತಿಸಲಾಗಿದೆ. ಮೃತರು ಸೇಲಂ ನಿವಾಸಿಗಳು ಎಂದು ಗುರುತಿಸಲಾಗಿದೆ ಎಂದು ಸ್ಥಳೀಯ ವರದಿಗಳು ತಿಳಿಸಿವೆ. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ವಿಷ ಸೇವಿಸಿರುವ ಶಂಕೆ ವ್ಯಕ್ತವಾಗಿದೆ.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande