ಬಾಂಗ್ಲಾ ಟೆಸ್ಟ್ ಪರಿಣಾಮ: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಶ್ರೇಯಾಂಕದಲ್ಲಿ ಭಾರಿ ಕುಸಿತ
ನವದೆಹಲಿ, 26 ಸೆಪ್ಟೆಂಬರ್(ಹಿ.ಸ.) : ಆ್ಯಂಕರ್ : ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಐಸಿಸಿ ರ್ಯಾಂಕಿಂಗ್​ನಲ್ಲಿ ಭಾರಿ ಕುಸಿತ ಕಂಡಿದ್ದಾರೆ. ಅದರಲ್ಲೂ ಟೆಸ್ಟ್ ಬ್ಯಾಟರ್​ಗಳ ಟಾಪ್-10 ಶ್ರೇಯಾಂಕ
Rohit Sharma a


ನವದೆಹಲಿ, 26 ಸೆಪ್ಟೆಂಬರ್(ಹಿ.ಸ.) :

ಆ್ಯಂಕರ್ : ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಐಸಿಸಿ ರ್ಯಾಂಕಿಂಗ್​ನಲ್ಲಿ ಭಾರಿ ಕುಸಿತ ಕಂಡಿದ್ದಾರೆ. ಅದರಲ್ಲೂ ಟೆಸ್ಟ್ ಬ್ಯಾಟರ್​ಗಳ ಟಾಪ್-10 ಶ್ರೇಯಾಂಕ ಪಟ್ಟಿಯಿಂದ ವಿರಾಟ್ ಕೊಹ್ಲಿ ಹೊರಬಿದ್ದಿದ್ದಾರೆ.

ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ರೋಹಿತ್ ಶರ್ಮಾ ಟೆಸ್ಟ್ ಬ್ಯಾಟರ್​ಗಳ ರ್ಯಾಂಕಿಂಗ್​ನಲ್ಲಿ 5ನೇ ಸ್ಥಾನದಲ್ಲಿದ್ದರು. ಆದರೆ ಚೆನ್ನೈ ಟೆಸ್ಟ್​ನ ಮೊದಲ ಇನಿಂಗ್ಸ್​ನಲ್ಲಿ 6 ರನ್ ಹಾಗೂ ಎರಡನೇ ಇನಿಂಗ್ಸ್​ನಲ್ಲಿ 5 ರನ್​ಗಳಿಗೆ ಔಟಾಗಿದ್ದ ಹಿಟ್​ಮ್ಯಾನ್ ಇದೀಗ ಟೆಸ್ಟ್ ಬ್ಯಾಟರ್​ಗಳ ಶ್ರೇಯಾಂಕದಲ್ಲಿ ಐದು ಸ್ಥಾನ ಕುಸಿತ ಕಂಡಿದ್ದಾರೆ. ಅಲ್ಲದೆ ನೂತನ ರ್ಯಾಕಿಂಗ್ ಪಟ್ಟಿಯಲ್ಲಿ 10ನೇ ಸ್ಥಾನ ಅಲಂಕರಿಸಿದ್ದಾರೆ.

ಮತ್ತೊಂದೆಡೆ ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್​ನಲ್ಲಿ 6 ರನ್​ ಬಾರಿಸಿದ್ದ ವಿರಾಟ್ ಕೊಹ್ಲಿ ದ್ವಿತೀಯ ಇನಿಂಗ್ಸ್​ನಲ್ಲಿ 17 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದರು. ಇದರ ಪರಿಣಾಮ ಇದೀಗ ಐಸಿಸಿ ಟೆಸ್ಟ್ ಬ್ಯಾಟರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ 12ನೇ ಸ್ಥಾನಕ್ಕೆ ಕುಸಿದಿದ್ದಾರೆ. ಇದಕ್ಕೂ ಮುನ್ನ ಕಿಂಗ್ ಕೊಹ್ಲಿ 7ನೇ ಸ್ಥಾನದಲ್ಲಿದ್ದರು ಎಂಬುದು ವಿಶೇಷ.

ಇದೀಗ ಟೀಮ್ ಇಂಡಿಯಾ ದಿಗ್ಗಜರಿಬ್ಬರೂ ದ್ವಿತೀಯ ಟೆಸ್ಟ್ ಪಂದ್ಯಕ್ಕಾಗಿ ಸಿದ್ಧತೆಯಲ್ಲಿದ್ದಾರೆ. ಕಾನ್ಪುರದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಮಿಂಚಿದರೆ ಶ್ರೇಯಾಂಕ ಪಟ್ಟಿಯಲ್ಲಿ ಮೇಲೇರಬಹುದು. ಒಂದು ವೇಳೆ ರೋಹಿತ್ ಶರ್ಮಾ ವಿಫಲರಾದರೆ, ಮುಂದಿನ ವಾರ ಅವರು ಸಹ ಟಾಪ್-10 ಪಟ್ಟಿಯಿಂದ ಹೊರಬೀಳಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande