ಬೆಂಗಳೂರು, 27 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ವಶದಲ್ಲಿರುವ ಆರೋಪಿಗಳಿಗೆ ಮತ್ತೆ ನಿರಾಸೆಯಾಗಿದೆ. ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ ಇನ್ನಿತರ ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ.
ಹತ್ಯೆ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ 57ನೇ ಸಿಸಿಎಚ್ ನ್ಯಾಯಾಲಯಕ್ಕೆ ಇಂದು ಸರ್ಕಾರಿ ವಿಶೇಷ ಅಭಿಯೋಜಕ ಪ್ರಸನ್ನಕುಮಾರ್ ಅವರು ಆರೋಪಿಗಳಿಗೆ ಜಾಮೀನು ನೀಡದಂತೆ ತಕರಾರು ಅರ್ಜಿ ಸಲ್ಲಿಸಿದರು. ವಾದ ಆರಂಭಿಸಿದ ದರ್ಶನ್ ಪರ ವಕೀಲ ಸುನೀಲ್, ''ಜಾಮೀನು ವಿಚಾರಣೆ ಸಂಬಂಧ ಇಂದು ಎಸ್ಪಿಪಿ ಆಕ್ಷೇಪಣಾ ಅರ್ಜಿ ಸಲ್ಲಿಸಿದ್ದಾರೆ. ವಾದ ಮಂಡಿಸಲು ಸಮಯಾವಕಾಶದ ಅಗತ್ಯವಿದೆ'' ಎಂದು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ನ್ಯಾಯಾಲಯ, ವಿಚಾರಣೆಯನ್ನು ಸೆ.30ಕ್ಕೆ ಮುಂದೂಡಿತು.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್