ನವದೆಹಲಿ, 03 ಸೆಪ್ಟೆಂಬರ್(ಹಿ.ಸ.) :
ಆ್ಯಂಕರ್ : ಈಗಾಗಲೇ ಕರ್ನಾಟಕದ ನಂದಿನಿ ಹಾಲು ದೇಶದಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಲ್ಲಿ ಉತ್ತಮ ಸ್ಥಾನವನ್ನು ಹೊಂದಿದ್ದು, ನಮ್ಮ ರಾಜ್ಯ ಮಾತ್ರವಲ್ಲದೇ ನೆರೆ ಹೊರೆ ರಾಜ್ಯಗಳು, ದೇಶ ವಿದೇಶಗಳಲ್ಲಿಯೂ ಮಾರಾಟ ಆಗುತ್ತಿವೆ, ನಂದಿನಿ ಬ್ರ್ಯಾಂಡ್‌ನ ಟೆಟ್ರಾ ಪ್ಯಾಕ್ ಹಾಲನ್ನು ನಮ್ಮ ದೇಶದ ಸೈನಿಕರಿಗೂ ಸರಬರಾಜು ಮಾಡಲಾಗುತ್ತಿದೆ. ಇದರ ಮಧ್ಯ ಇದೀಗ ಕರ್ನಾಟಕ ಹಾಲು ಒಕ್ಕೂಟ ಮಹಾಮಂಡಳ ಉತ್ಪಾದಿಸುವ ನಂದಿನಿ ಹಾಲನ್ನು ನವದೆಹಲಿಗೂ ಸರಬರಾಜು ಮಾಡುವಂತೆ ಬೇಡಿಕೆ ಬಂದಿದೆ. ನಂದಿನಿ ಹಾಲನ್ನು ರಾಷ್ಟ್ರ ರಾಜಧಾನಿ ನವದೆಹಲಿಗೂ ಕಳುಹಿಸುವಂತೆ ದೆಹಲಿ ಸರ್ಕಾರ ಮನವಿ ಮಾಡಿದೆ. ಪ್ರತಿನಿತ್ಯ ದೆಹಲಿಗೆ 1 ಲಕ್ಷ ಲೀಟರ್ ಹಾಲನ್ನು ಸರಬರಾಜು ಮಾಡುವಂತೆ ದೆಹಲಿ ಸರ್ಕಾರದಿಂದ ಮನವಿ ಮಾಡಲಾಗಿದೆ.
ದೇಶದ ಮೆಟ್ರೋ ಪಾಲಿಟಿನ್ ಸಿಟಿಯಾಗಿರುವ ದೆಹಲಿ ಕೇಂದ್ರಾಡಳಿತ ಪ್ರದೇಶ ಆಗಿದ್ದರೂ ಪ್ರತ್ಯೇಕ ಸರ್ಕಾರದ ವ್ಯವಸ್ಥೆಯನ್ನು ಹೊಂದಿದೆ. ಇಲ್ಲಿನ ಜನಸಂಖ್ಯೆಗೆ ಅನುಗುಣವಾಗಿ ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ. ಇನ್ನು ನವದೆಹಲಿಗೆ ಹತ್ತಿರದಲ್ಲಿರುವ ಗುಜರಾತ್ ರಾಜ್ಯದ ಅಮುಲ್ ಹಾಲು, ಮದರ್ ಡೈರಿಯ ಹಾಲನ್ನು ನವದೆಹಲಿಗೆ ಸರಬರಾಜು ಮಾಡಲಾಗುತ್ತಿದೆ. ಈಗ ದೆಹಲಿ ಸರ್ಕಾರದಿಂದಲೂ ಕೆಎಂಎಪ್‌ನ ನಂದಿನಿ ಹಾಲಿಗೆ ಬೇಡಿಕೆ ಬಂದಿದೆ.ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಮುಲ್ ಹಾಗೂ ಮದರ್ ಡೈರಿ ಹಾಲನ್ನು ಹಿಂದಿಕ್ಕಿ ತನ್ನದೇ ದಾಖಲೆ ಬರೆಯಲು ಕರ್ನಾಟಕದ ನಂದಿನಿ ಹಾಲು ಸಿದ್ಧಗೊಂಡಿದೆ. ಮುಂದಿನ ತಿಂಗಳು ಅಕ್ಟೋಬರ್‌ನಿಂದ ದೆಹಲಿಯಲ್ಲಿ ಹಾಲು ಹಾಗೂ ಮೊಸರು ಮಾರಾಟಕ್ಕೆ ಸಜ್ಜಾಗಿರುವ ಕೆಎಂಎಫ್, ಈ ಮೂಲಕ ನಂದಿನಿ ಬ್ರ್ಯಾಂಡ್ ಅನ್ನ ರಾಷ್ಟ್ರಮಟ್ಟದಲ್ಲೂ ಮಿಂಚಲಿದೆ.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್