ಹುಬ್ಬಳ್ಳಿ, 30 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಹುಬ್ಬಳ್ಳಿ ನಗರದಲ್ಲಿ ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿ ಕಳ್ಳತನ ಮಾಡುತ್ತಿದ್ದ ಓರ್ವ ಮಹಿಳೆ ಹಾಗೂ ಕೃತ್ಯಕ್ಕೆ ಸಹಕರಿಸಿದ ವ್ಯಕ್ತಿಯನ್ನು ಬಂಧಿಸುವಲ್ಲಿ ಅಶೋಕ ನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಪ್ರಕರಣ ಸಂಬಂಧ ಗಂಗಾಧರನಗರದ ನಿವಾಸಿ ರತ್ನವ್ವ ಬಾಳಿಮೇಡ್ (45), ಕುಸುಗಲ್ ನಿವಾಸಿ ಮುಕ್ತುಂಸಾಬ್ ಕುಂಬಿ (27), ಅವರನ್ನು ಬಂಧಿಸಲಾಗಿದೆ.
ಬಂಧಿತರಿಂದ 2.50 ಲಕ್ಷ ರೂ ಮೌಲ್ಯದ 50 ಗ್ರಾಂ ತೂಕದ 4 ಬಂಗಾರದ ಬಳೆಗಳು, 50 ಸಾವಿರ ಮೌಲ್ಯದ 10 ಗ್ರಾಂ ತೂಕದ ಬಂಗಾರದ ಚೈನ್, 50 ಸಾವಿರ ರೂ ಮೌಲ್ಯದ 6 ಜೊತೆ ಕಿವಿಯೋಲೆ, 1.50 ಲಕ್ಷ ರೂ ಮೌಲ್ಯದ ಬಂಗಾರದ ಪದಕ, ಎರಡು ತೋಡೆಗಳು ಹಾಗೂ 10 ಗ್ರಾಂ ಬೆಳ್ಳಿ ಆಭರಣಗಳನ್ನು ವಶ ಪಡಿಸಿಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ 5.33 ಲಕ್ಷ ಎಂದು ಅಂದಾಜಿಸಲಾಗಿದೆ.
ಅಶೋಕ ನಗರ ಪೋಲಿಸ ಠಾಣೆಯ ಪಿಐ ಮಂಜುನಾಥ.ಟಿ.ಎಮ್. ನೇತೃತ್ವದಲ್ಲಿ ಪಿಎಸ್ಐ ಎನ್.ಎಮ್.ಮನಿಯಾರ್, ಸಿಬ್ಬಂದಿ ಎಸ್. ಎಚ್. ಪಾಟೀಲ್, ವಾಯ್.ಬಿ.ಮೊರಬ್, ರಾಜೇಂದ್ರ ಸಕ್ರಪಗೋಳ, ವಿರೇಶ ಮಹಾಜನಶೆಟ್ಟರ್ ತಂಡ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa