ನವದೆಹಲಿ, 30 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಹಿಂದಿ ಚಲನಚಿತ್ರ ನಟ ಮಿಥುನ್ ಚಕ್ರವರ್ತಿ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ದೊರೆತಿದೆ. ಅವರಿಗೆ ಭಾರತೀಯ ಚಿತ್ರರಂಗಕ್ಕೆ ನೀಡಿದ ವಿಶಿಷ್ಟ ಕೊಡುಗೆಗಾಗಿ ಮಿಥುನ್ ಚಕ್ರವರ್ತಿ ಗೆ ಈ ಪ್ರಶಸ್ತಿ ದೊರೆತಿದೆ.
ಈ ಕುರಿತು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಅಕ್ಟೋಬರ್ ೮ ರಂದು ನಡೆಯುವ ೭೦ನೇ ರಾಷ್ಟ್ರೀಯ ಚಲನ ಚಿತ್ರೋತ್ಸವದ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಗುವುದು ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa