ಅಕ್ಟೋಬರ್ 1ರಿಂದ ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲೆಗಳ ಕ್ರೀಡಾಕೂಟ
ಕೊಪ್ಪಳ, 30 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಇವರ ಸಂಯುಕ್ತಾಶ್ರದಲ್ಲಿ 2024-25ನೇ ಸಾಲಿನ ಕೊಪ್ಪಳ ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲೆಗಳ
ಅಕ್ಟೋಬರ್ 1ರಿಂದ ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲೆಗಳ ಕ್ರೀಡಾಕೂಟ


ಕೊಪ್ಪಳ, 30 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಇವರ ಸಂಯುಕ್ತಾಶ್ರದಲ್ಲಿ 2024-25ನೇ ಸಾಲಿನ ಕೊಪ್ಪಳ ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲೆಗಳ ಕ್ರೀಡಾಕೂಟದ ಸ್ಪರ್ಧೆಗಳ ಉದ್ಘಾಟನಾ ಸಮಾರಂಭವನ್ನು ಅಕ್ಟೋಬರ್ 1ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಕೊಪ್ಪಳ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕರು ಮತ್ತು ದೈಹಿಕ ಶಿಕ್ಷಣ ಶಿಕ್ಷಕರು ಸರ್ವ ಪದಾಧಿಕಾರಿಗಳು, ತಾಲೂಕು ಸಮಸ್ತ ಶಿಕ್ಷಕರು-ಶಿಕ್ಷಕಿಯರು/ ಶಿಕ್ಷಣ ಇಲಾಖೆಯ ನೌಕರ ವೃಂದ ಹಾಗೂ ಸಂಘ ಸಂಸ್ಥೆಗಳು, ಇ.ಸಿ.ಓ, ಬಿ.ಆರ್.ಪಿ ಹಾಗೂ ಎಲ್ಲಾ ವಲಯಗಳ ಸಿ.ಆರ್.ಪಿ ಗಳು, ಬಿ.ಆಯ್.ಇ, ಆರ್.ಟಿ ಗಳು ಹಾಗೂ ಬಿ.ಓ. ಕಾರ್ಯಲಯದ ಸಿಬ್ಬಂದಿಗಳು ಉಪಸ್ಥಿತರಿರುವರು ಎಂದು ಕೊಪ್ಪಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande