ಚಂಪಕನಗರ, 30 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಸಂಬಂಧಗಳ ಬೆಲೆ ಅರಿಯದ ಮಕ್ಕಳು ತಾಯಿಯನ್ನು ಮರಕ್ಕೆ ಕಟ್ಟಿಹಾಕಿ ಸಜೀವವಾಗಿ ದಹಿಸಿರುವ ಘಟನೆ ಪಶ್ಚಿಮ ತ್ರಿಪುರಾದಲ್ಲಿ ನಡೆದಿದೆ. 62 ವರ್ಷದ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಇಬ್ಬರು ಪುತ್ರರು ಜೀವಂತವಾಗಿ ಸುಟ್ಟುಹಾಕಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪುತ್ರರನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದು, ಕೌಟುಂಬಿಕ ಕಲಹವೇ ಭೀಕರ ಕೊಲೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಚಂಪಕನಗರ ಪೊಲೀಸ್ ಠಾಣೆ ವ್ಯಾಪ್ತಿಯ ಖಮರ್ಬರಿಯಲ್ಲಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.
ಮಹಿಳೆ ಸುಮಾರು ಒಂದೂವರೆ ವರ್ಷದ ಹಿಂದೆ ಪತಿಯನ್ನು ಕಳೆದುಕೊಂಡ ನಂತರ ತನ್ನ ಇಬ್ಬರು ಗಂಡು ಮಕ್ಕಳೊಂದಿಗೆ ವಾಸಿಸುತ್ತಿದ್ದರು. ಆಕೆಯ ಇನ್ನೊಬ್ಬ ಮಗ ಅಗರ್ತಲಾದಲ್ಲಿ ವಾಸಿಸುತ್ತಿದ್ದ. ಪೊಲೀಸ್ ತಂಡವು ಅಲ್ಲಿಗೆ ಧಾವಿಸಿತು ಮತ್ತು ಮರಕ್ಕೆ ಕಟ್ಟಿದ ಸುಟ್ಟ ದೇಹವನ್ನು ಕಂಡು ನಾವು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕೊಂಡೊಯ್ದಿದ್ದೇವೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ನಾವು ಆಕೆಯ ಇಬ್ಬರು ಪುತ್ರರನ್ನು ಬಂಧಿಸಿದ್ದೇವೆ. ಅವರನ್ನು ಇಂದು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು, ಕೌಟುಂಬಿಕ ಕಲಹ ಘಟನೆಗೆ ಕಾರಣವಾಗಿರಬಹುದು. ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್