ಪ್ರೋತ್ಸಾಹ ಧನಕ್ಕಾಗಿ .ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಹುಬ್ಬಳ್ಳಿ, 04 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕಗಳಿಸಿದ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ಅರ್ಹ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕಾಗ
ಪ್ರೋತ್ಸಾಹ ಧನಕ್ಕಾಗಿ .ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ


ಹುಬ್ಬಳ್ಳಿ, 04 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕಗಳಿಸಿದ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ಅರ್ಹ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಶೇ.60 ಕ್ಕಿಂತ ಹೆಚ್ಚು ಶೇ.75 ರವರೆಗೆ ಅಂಕಗಳಿಸಿದವರಿಗೆ ಪ್ರೋತ್ಸಾಹಧನ ರೂ. 7000 ಹಾಗೂ ಶೇ. 75 ಕ್ಕಿಂತ ಹೆಚ್ಚು ಅಂಕ ಗಳಿಸಿದವರಿಗೆ ರೂ. 15000 ಪ್ರೋತ್ಸಾಹಧನ ನೀಡಲಾಗುವುದು.

ಅರ್ಹ ವಿದ್ಯಾರ್ಥಿಗಳು sw.kar.nic.in ಇಲಾಖೆ ವೆಬ್ ಸೈಟ್‌ನ ಮೂಲಕ ಅರ್ಜಿ ಸಲ್ಲಿಸಬಹುದು. ಆನ್ ಲೈನ್ ಅರ್ಜಿ ಸಲ್ಲಿಸಿದ ದೃಢೀಕೃತ ದಾಖಲೆಗಳೊಂದಿಗೆ ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಹುಬ್ಬಳ್ಳಿ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0836-2278066 ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande