ಪಿಎಂಎವೈ ಯೋಜನೆ,ಅಸಂಘಟಿತ ಕಾರ್ಮಿಕರ ಸೇರ್ಪಡೆ
ಪಿಎಂಎವೈ ಯೋಜನೆ,ಅಸಂಘಟಿತ ಕಾರ್ಮಿಕರ ಸೇರ್ಪಡೆ
ಯೋಜನೆ


ನವದೆಹಲಿ, 04 ಸೆಪ್ಟೆಂಬರ್(ಹಿ.ಸ.) :

ಆ್ಯಂಕರ್ : ಪ್ರಧಾನ ಮಂತ್ರಿ ಆವಾಸ್ ಯೋಜನೆ- ಪಿಎಂಎವೈ ಪ್ರಯೋಜನೆಗಳನ್ನು ಅಸಂಘಟಿತ ಕಾರ್ಮಿಕರಿಗೆ ವಿಸ್ತರಿಸುವ ಕ್ರಮವನ್ನು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಪ್ರಾರಂಭಿಸಿದೆ. ವಲಸೆ ಕಾರ್ಮಿಕರು, ಕಟ್ಟಡ ಕಾರ್ಮಿಕರು, ಬೀಡಿ ಕಾರ್ಮಿಕರು, ಸಿನಿ ಕಾರ್ಮಿಕರು, ಕಲ್ಲಿದ್ದಲು ಕಾರ್ಮಿಕರು, ಗುತ್ತಿಗೆ ಕಾರ್ಮಿಕರು ಮತ್ತು ಇತರೆ ಅಸಂಘಟಿತ ಕಾರ್ಮಿಕರನ್ನು ಸೇರ್ಪಡೆಗೊಳಿಸುವಂತೆ ಒತ್ತಾಯಿಸಿ, ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಎಲ್ಲಾ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದಿದೆ.

ಅರ್ಹ ಫಲಾನುಭವಿಗಳಿಗೆ ಎರಡು ಕೋಟಿ ಹೆಚ್ಚುವರಿ ಮನೆಗಳನ್ನು ಒದಗಿಸುವ ಗುರಿಯೊಂದಿಗೆ ಪ್ರಸಕ್ತ ಹಣಕಾಸು ವರ್ಷದಿಂದ ೨೦೨೮-೨೯ ರವರೆಗೆ ಹೆಚ್ಚುವರಿ ಐದು ವರ್ಷಗಳವರೆಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ವಿಸ್ತರಿಸಲು ಕೇಂದ್ರ ಸಚಿವ ಸಂಪುಟದ ಅನುಮೋದನೆ ಪರಿಗಣಿಸಿ, ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಉಪಕ್ರಮವು ಆರ್ಥಿಕವಾಗಿ ದುರ್ಬಲ ಕಾರ್ಮಿಕರ ವಸತಿ ಅಗತ್ಯಗಳನ್ನು ಪೂರೈಸುತ್ತದೆ.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande