ಸೆಪ್ಟಂಬರ್ ಮಾಹೆಗೆ ಪಡಿತರ ಧಾನ್ಯಗಳು ವಿತರಣೆ
ರಾಯಚೂರು, 04 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಜಿಲ್ಲಾ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ವತಿಯಿಂದ 2024ರ ಸೆಪ್ಟಂಬರ್ ಮಾಹೆಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯ ಪ್ರತಿ ಅಂತ್ಯೋದಯ (ಎ.ಎ.ವೈ) ಪಡಿತರ ಚೀಟಿಗೆ 21 ಕೆ.ಜಿ ಸಾರವರ್ಧಿತ ಅಕ್ಕಿ ಮತ್ತು 14 ಕೆ.ಜಿ
ಸೆಪ್ಟಂಬರ್ ಮಾಹೆಗೆ ಪಡಿತರ ಧಾನ್ಯಗಳು ವಿತರಣೆ


ರಾಯಚೂರು, 04 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ಜಿಲ್ಲಾ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ವತಿಯಿಂದ 2024ರ ಸೆಪ್ಟಂಬರ್ ಮಾಹೆಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯ ಪ್ರತಿ ಅಂತ್ಯೋದಯ (ಎ.ಎ.ವೈ) ಪಡಿತರ ಚೀಟಿಗೆ 21 ಕೆ.ಜಿ ಸಾರವರ್ಧಿತ ಅಕ್ಕಿ ಮತ್ತು 14 ಕೆ.ಜಿ ಜೋಳ ಹಾಗೂ ಪಿ.ಹೆಚ್.ಹೆಚ್(ಬಿಪಿಎಲ್) ಪಡಿತರ ಚೀಟಿಯಲ್ಲಿನ ಪ್ರತಿ ಫಲಾನುಭವಿಗೆ 03 ಕೆ.ಜಿ ಸಾರವರ್ಧಿತ ಅಕ್ಕಿ ಮತ್ತು 02 ಕೆ.ಜಿ ಜೋಳವನ್ನು ಉಚಿತವಾಗಿ ವಿತರಿಸಲಾಗುತ್ತದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಒಪ್ಪಿಗೆ ಅಥವಾ ಸಮ್ಮತಿ ಸೂಚಿಸಿರುವ ಎಪಿಎಲ್(ಎನ್‍ಪಿಹೆಚ್‍ಹೆಚ್) ಪಡಿತರ ಚೀಟಿದಾರರಿಗೆ ರಿಯಾಯಿತಿ ದರದಲ್ಲಿ ಪ್ರತಿ ಕೆ.ಜಿಗೆ.15/- ರೂ.ರಂತೆ ಏಕ ಸದ್ಯಸರ ಪಡಿತರ ಚೀಟಿಗೆ 05 ಕೆ.ಜಿ ಅಕ್ಕಿ ಹಾಗೂ ಎರಡು ಮತ್ತು ಹೆಚ್ಚಿನ ಕುಟುಂಬ ಸದಸ್ಯರಿರುವ ಎಪಿಎಲ್ ಪಡಿತರ ಚೀಟಿಗೆ 10 ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು.

ಒಂದು ರಾಷ್ಟ್ರ ಒಂದು ಪಡಿತರ ಚೀಟಿ (ಅಂತರ್ ರಾಜ್ಯ/ ಅಂತರ್ ಜಿಲ್ಲೆ) ಪೋರ್ಟೆಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ರಾಜ್ಯದ ಪಡಿತರ ಚೀಟಿದಾರರು ಯಾವುದೇ ವರ್ಗದ ಪಡಿತರ ಚೀಟಿದಾರರು ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರವನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಯಾವುದೇ ನ್ಯಾಯಬೆಲೆ ಅಂಗಡಿಕಾರರು ಕಡಿಮೆ ಪ್ರಮಾಣದ ಪಡಿತರವನ್ನು ವಿತರಣೆ ಮಾಡಿದ್ದಲ್ಲಿ, ಹಣ ಕೇಳಿದ್ದಲ್ಲಿ ಮತ್ತು ಇತರೆ ದೂರುಗಳಿಗೆ ನಿಶುಲ್ಕ ದೂರವಾಣಿ ಸಂಖ್ಯೆ:1967ಗೆ ಹಾಗೂ ತಾಲ್ಲೂಕಿನಲ್ಲಿರುವ ತಹಶೀಲ್ದಾರರ ಕಚೇರಿಗೆ ಅಥವಾ ಜಿಲ್ಲೆಯ ಉಪನಿದೇರ್ಶಕರ ಕಚೇರಿಗೆ ದೂರನ್ನು ಸಲ್ಲಿಸಬಹುದಾಗಿದೆ.

ಈ ಯೋಜನೆಯಡಿ ವಿತರಿಸಲಾದ ಆಹಾರ ಧಾನ್ಯಗಳನ್ನು ಹಣಕ್ಕಾಗಿ ಪಡಿತರ ಚೀಟಿದಾರರು ಮಾರಾಟ ಮಾಡುವುದಾಗಲಿ ಅಥವಾ ಸಂಗ್ರಹಣೆ ಮಾಡುವುದು ಕಂಡುಬಂದಲ್ಲಿ, ಅಂತಹ ಪಡಿತರ ಚೀಟಿದಾರರಿಗೆ ವಿತರಿಸಲಾದ ಆಹಾರ ಧಾನ್ಯಗಳಿಗೆ ಮುಕ್ತ ಮಾರುಕಟ್ಟೆ ದರಕ್ಕೆ ದಂಡ ವಿಧಿಸಲಾಗುವುದು ಮತ್ತು ಸದರಿ ಪಡಿತರ ಚೀಟಿಯನ್ನು ಆರು ತಿಂಗಳ ಅವಧಿಗೆ ಅಮಾನತ್ತುಗೊಳಿಸಲಾಗುವುದು ಎಂದು ಆಹಾರ, ನಾಗರಿಕ ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande