ನವದೆಹಲಿ, 04 ಸೆಪ್ಟೆಂಬರ್(ಹಿ.ಸ.) :
ಆ್ಯಂಕರ್ : ಭಾರತ ಹಸಿರು ಜಲಜನಕ ಕೇಂದ್ರ ಆಗಬೇಕಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ನವದೆಹಲಿಯಲ್ಲಿ ಸೆಪ್ಟೆಂಬರ್ 11ರಿಂದ 13ರ ವರೆಗೆ ನಡೆಯಲಿರುವ ಗ್ರೀನ್ ಹೈಡ್ರೋಜನ್ ಮಿಷನ್ ಅಂತಾರಾಷ್ಟ್ರೀಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಹಸಿರು ಜಲಜನಕ ಕೇಂದ್ರದಿಂದ ಸುಸ್ಥಿರ ಭವಿಷ್ಯ ನಿರ್ಮಾಣ ಸಾಧ್ಯ. ಭೂಮಂಡಲ ಸುರಕ್ಷತೆ ವಿಚಾರದಲ್ಲಿ ಭಾರತ ಜಾಗತಿಕ ನಾಯಕನಾಗುತ್ತಿದೆ. ಅಭಿವೃದ್ಧಿ ಹೊಂದಿದ ದೇಶಗಳಂತೆ ಭಾರತವೂ ಹೊಸ ಆವಿಷ್ಕಾರ ಶುರುಮಾಡಿದೆ ಎಂದರು.
ಗ್ರೀನ್ ಹೈಡ್ರೋಜನ್ ಮಿಷನ್ ಅಂತಾರಾಷ್ಟ್ರೀಯ ಸಮ್ಮೇಳನದ ಉತ್ಪನ್ನ ಮತ್ತು ತಂತ್ರಜ್ಞಾನದ ಪ್ರದರ್ಶನದಲ್ಲಿ 120 ಕ್ಕೂ ಹೆಚ್ಚು ಮಳಿಗೆಗಳು ಇರಲಿವೆ. 150ಕ್ಕೂ ಹೆಚ್ಚು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಭಾಷಿಕರು ಭಾಗವಹಿಸಲಿದ್ದಾರೆ.
ಹಸಿರು ಜಲಜನಕ ಸಂಬಂಧ ಯುರೋಪಿಯನ್ ಯೂನಿಯನ್, ಆಸ್ಟ್ರೇಲಿಯಾ, ಸಿಂಗಾಪುರ್ ಮತ್ತು ನೆದರ್ಲ್ಯಾಂಡ್ಸ್ ಬಗ್ಗೆ ಅಧಿವೇಶನಗಳಲ್ಲಿ ಚರ್ಚೆ ನಡೆಯಲಿದೆ.ಕಾರ್ಯಕ್ರಮವನ್ನು ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯವು ಭಾರತ ಸರ್ಕಾರದ ಪ್ರಧಾನ ವಿಜ್ಞಾನಿಗಳ ಕಚೇರಿಯ ಸಹಯೋಗದೊಂದಿಗೆ ಆಯೋಜಿಸುತ್ತಿದೆ.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್