ಬೆಂಗಳೂರು, 04ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ದೊರೆತಿದೆ. ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಚೇರಿಯಲ್ಲಿ ನಡೆದ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರತಿ ಪಕ್ಷ ನಾಯಕ ಆರ್. ಅಶೋಕ್ ಮಾತನಾಡಿ, ಈ ಬಾರಿ ಎಷ್ಟು ಮತ ಬಿಜೆಪಿಗೆ ಬಂದಿದೆ ಅದರಲ್ಲಿ ಶೇ.75 ರಷ್ಟು ಜನರು ಸದಸ್ಯರಾಗಬೇಕು ಎಂದು ಹೇಳಿದರು. ಬಿಜೆಪಿಯಲ್ಲಿ ಉಚಿತವಾಗಿ ಸದಸ್ಯತ್ವ ಮಾಡಿಕೊಳ್ಳುತ್ತದೆ. ಬಿಜೆಪಿ ಜೀವ ಇರುವುದೇ ಕಾರ್ಯಕರ್ತರಲ್ಲಿ ಎಂದರು.ಕಾಂಗ್ರೆಸ್ನವರಿಗೆ ಸದಸ್ಯರು ಎಷ್ಟಿದ್ದಾರೆ ಎಂಬುದು ಮುಖ್ಯ ಅಲ್ಲ, ಕುಟುಂಬ ಇದೆಯೋ ಇಲ್ಲವೋ ಎನ್ನುವುದೇ ಮುಖ್ಯ ಅವರಿಗೆ. ರಾಹುಲ್ ಗಾಂಧಿ ದೇಶ ಬಿಟ್ಟು ಹೋದರೆ ಏನು ಕಥೆ? ಅವರದ್ದು ನಾಯಕ ತಳ ಪಕ್ಷ. ಕಾಂಗ್ರೆಸ್ನವರು 1 ರೂ. ನೀಡಿ ಸದಸ್ಯತ್ವ ಮಾಡಿಕೊಳ್ಳುತ್ತಿದ್ದರು. ಹೆಚ್ಚು ಸದಸ್ಯತ್ವ ಆಗಿದೆ ಎಂದು ತೋರಿಸಲು ಈ ತರಹ ಮಾಡುತ್ತಿದ್ದರು ಎಂದು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್