ಪ್ರಧಾನಿ ಮೋದಿ -ಸುಲ್ತಾನ್ ಹಾಜಿ ಹಸನಲ್ ಬೋಲ್ಕಿಯಾ ಮಾತುಕತೆ
ಬಂದರ್ ಸೀರಿ ಬೇಗವಾನ್, 04 ಸೆಪ್ಟೆಂಬರ್(ಹಿ.ಸ.) : ಆ್ಯಂಕರ್ : ಬ್ರೂನೈ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಇಂದು ಆ ದೇಶದ ಸುಲ್ತಾನ್ ಹಾಜಿ ಹಸನಲ್ ಬೊಲ್ಕಿಯಾ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಉಭಯ ದೇಶಗಳ ನಡುವಿನ ಎಲ್ಲ ಆಯಾಮಗಳ ದ್ವಿಪಕ್ಷೀಯ ಸಂಬಂಧಗಳು ಹಾಗೂ ಹೊಸ ಕ್ಷೇತ್ರಗಳಲ್ಲಿ ಸರ್ಕ
ಬಂದರ್ ಸೀರಿ ಬೇಗವಾನ್


ಬಂದರ್ ಸೀರಿ ಬೇಗವಾನ್, 04 ಸೆಪ್ಟೆಂಬರ್(ಹಿ.ಸ.) :

ಆ್ಯಂಕರ್ : ಬ್ರೂನೈ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಇಂದು ಆ ದೇಶದ ಸುಲ್ತಾನ್ ಹಾಜಿ ಹಸನಲ್ ಬೊಲ್ಕಿಯಾ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಉಭಯ ದೇಶಗಳ ನಡುವಿನ ಎಲ್ಲ ಆಯಾಮಗಳ ದ್ವಿಪಕ್ಷೀಯ ಸಂಬಂಧಗಳು ಹಾಗೂ ಹೊಸ ಕ್ಷೇತ್ರಗಳಲ್ಲಿ ಸರ್ಕಾರ ವಿಸ್ತರಣೆ ಕುರಿತು ಚರ್ಚೆ ನಡೆಸುವ ಸಾಧ್ಯತೆಯಿದೆ. ಇದೇ ವೇಳೆ ಹಲವು ಒಪ್ಪಂದಗಳಿಗೆ ಅಂಕಿತ ಹಾಕುವ ನಿರೀಕ್ಷ್ಷೆಯಿದೆ.

ಬ್ರೂನೈ ಮತ್ತು ಸಿಂಗಾಪುರ್ ಈ ಎರಡು ರಾಷ್ಟ್ರಗಳಿಗೆ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಮೊದಲ ಚರಣದಲ್ಲಿ ನಿನ್ನೆ ಸಲಾಮ್‌ನ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಪ್ರಧಾನಿ ಅವರನ್ನು ಅಲ್ಲಿನ ರಾಜಕುಮಾರ ಹಾಜಿ ಅಲ್ ಮುಹ್ತಾದಿ ಬಿಲ್ಲಾಹ್ ಸ್ವಾಗತಿಸಿದರು. ಇದೇ ವೇಳೆ ಪ್ರಧಾನಿ ಅವರಿಗೆ ಬ್ರೂನೈನಲ್ಲಿರುವ ಭಾರತೀಯ ಸಮುದಾಯದವರು ಆತ್ಮೀಯ ಸ್ವಾಗತ ಕೋರಿದರು.

ದರುಸ್ಸಲಾಮ್‌ಗೆ ಪ್ರಯಾಣ ಬೆಳೆಸುವ ಮುನ್ನ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತನಾಡಿ, ಮೊದಲ ಬಾರಿಗೆ ದ್ವಿಪಕ್ಷೀಯ ಪ್ರವಾಸ ಕೈಗೊಳ್ಳಲಾಗಿದೆ. ಭಾರತ ಮತ್ತು ಬ್ರೂನೈ ೪೦ ವರ್ಷಗಳ ರಾಜತಾಂತ್ರಿಕ ಸಂಬಂಧ ಆಚರಿಸುತ್ತಿರುವ ಸಂದರ್ಭದಲ್ಲಿ, ಸುಲ್ತಾನ್ ಹಾಜಿ ಹಸನಲ್ ಬೊಲ್ಕಿಯಾ ಮತ್ತು ರಾಜಮನೆತನದ ಇತರೆ ಸದಸ್ಯರ ಭೇಟಿಗಳನ್ನು ಎದುರು ನೋಡುತ್ತಿದ್ದೇನೆ ಎಂದು ಹೇಳಿದರು.

ಪ್ರಧಾನಿ ಅವರು, ಬಂದರ್ ಸೇರಿ ಬೆಗವಾನ್‌ನಲ್ಲಿ ಭಾರತೀಯ ರಾಯಭಾರಿಯ ನೂತನ ಕಚೇರಿಯನ್ನು ಉದ್ಘಾಟಿಸಿದರು. ಅಲ್ಲದೆ, ಬ್ರೂನೈನಲ್ಲಿರುವ ಹೋಮರ್ ಅಲಿ ಸೈಫುದ್ದೀನ್ ಮಸೀದಿಗೂ ಭೇಟಿ ನೀಡಿದರು. ಬ್ರೂನೈ ನಂತರ ಪ್ರಧಾನಿ ನರೇಂದ್ರ ಮೋದಿ ಅವರು, ಸಿಂಗಾಪುರಕ್ಕೆ ಭೇಟಿ ನೀಡಲಿದ್ದು, ಅಧ್ಯಕ್ಷ ಥರ್ಮನ್ ಷಣ್ಮುಗರತ್ನಂ, ಪ್ರಧಾನಿ ಲಾರೆನ್ಸ್ ವಾಂಗ್, ಹಿರಿಯ ಸಚಿವರಾದ ಲೀ ಸೀನ್ ಲೂಂಗ್ ಮತ್ತು ಗೋ ಚೋಕ್ ಟಾಂಗ್ ಅವರನ್ನು ಭೇಟಿ ಮಾಡುವ ಅವಕಾಶಕ್ಕಾಗಿ ಎದುರು ನೋಡುತ್ತಿದ್ದೇನೆ ಎಂದು ಅವರು ಹೇಳಿದರು. ತಮ್ಮ ಪ್ರವಾಸದ ವೇಳೆ ನರೇಂದ್ರ ಮೋದಿ ಅವರು ಸಿಂಗಾಪುರದ ಉದ್ಯಮಿಗಳನ್ನು ಭೇಟಿಯಾಗಲಿದ್ದಾರೆ. ಸಿಂಗಾಪುರದೊಂದಿಗಿನ ಕಾರ್ಯತಂತ್ರದ ಸಹಭಾಗಿತ್ವವನ್ನು ವಿಶೇಷವಾಗಿ ಸುಧಾರಿತ ಉತ್ಪಾದನೆ, ಡಿಜಿಟಲೀಕರಣ ಮತ್ತು ಸುಸ್ಥಿರ ಅಭಿವೃದ್ಧಿಯ ಹೊಸ ಮತ್ತು ಉದಯೋನ್ಮುಖ ಕ್ಷೇತ್ರಗಳಲ್ಲಿ ಆಳವಾಗಿಸಲು ಚರ್ಚಿಸಲು ಎದುರು ನೋಡುತ್ತಿದ್ದೇನೆ ಎಂದು ಪ್ರಧಾನಿ ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande