ರಾಯಚೂರು, 04 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ 2024-25ನೇ ಸಾಲಿನ ಜಿಲ್ಲಾ ಹಾಗೂ ತಾಲೂಕ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಇದೇ ಸೆ.05ರ ಬೆಳಿಗ್ಗೆ 10.30ಗಂಟೆಗೆ ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದಲ್ಲಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಕಿರಿಯ ಪ್ರಾಥಮಿಕ ಶಾಲಾ ವಿಭಾಗ; ದೇವದುರ್ಗ ತಾಲೂಕಿನ ಆರೇರದೊಡ್ಡಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಮಹಾದೇವಿ, ಲಿಂಗಸೂಗೂರು ತಾಲೂಕಿನ ಮಟ್ಟೂರು ತಾಂಡಾದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಸುಗೂರಯ್ಯ, ಮಾನವಿ ತಾಲೂಕಿನ ಪಿ.ಡಬ್ಲ್ಯೂ.ಡಿ ಕ್ಯಾಂಪ್ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ವೈ ಶ್ರೀನಿವಾಸ, ಸಿಂಧನೂರು ತಾಲೂಕಿನ ತಾತಪ್ಪಕ್ಯಾಂಪ್ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕರಾದ ಅಮರೇಶ ಈರಣ್ಣಗಸ್ತಿ , ರಾಯಚೂರು ತಾಲೂಕಿನ ಗಾಣದಾಳ ಜನತಾ ಕಾಲೋನಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಭೀಮಣ್ಣ.
ಹಿರಿಯ ಪ್ರಾಥಮಿಕ ಶಾಲಾ ವಿಭಾಗ; ದೇವದುರ್ಗ ತಾಲೂಕಿನ ಶಂಕರಬಂಡಿ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರುಗಳಾದ ಆಂಜನೇಯ, ಲಿಂಗಸೂಗೂರು ತಾಲೂಕಿನ ಗೋನವಾಟ್ಲ ತಾಂಡಾದ .ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಂಜುನಾಥ ಡಿ.ಎಲ್, ಮಾನವಿ ತಾಲೂಕಿನ ನಮಾಜಗೇರಗುಡ್ಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕರಾದ ವೀಣಾಜೋಷಿ, ಸಿಂಧನೂರು ತಾಲೂಕಿನ ಸೋಮಲಾಪೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕರಾದ ಸುನಿತಾ, ರಾಯಚೂರು ತಾಲೂಕಿನ ನೆಲಹಾಳ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕರಾದ ಗಂಗಾಬಾಯಿ
ಪ್ರೌಢ ಶಾಲಾ ವಿಭಾಗ; ದೇವದುರ್ಗ ತಾಲೂಕಿನ ಮಸರಕಲ್ ಸರಕಾರಿ ಪ್ರೌಢ ಶಾಲೆಯ ಪ್ರಭಾರಿ ಮುಖ್ಯಗುರುಗಳಾದ ಎ.ವಿ. ಬಸವರಾಜ, ಲಿಂಗಸೂಗೂರು ತಾಲೂಕಿನ ಕಾಚಾಪೂರ ಸರಕಾರಿ ಪ್ರೌಢ ಶಾಲೆಯ ಸಹ ಶಿಕ್ಷಕರಾದ ರಾಜು ಖೋತ್, ಮಾನವಿ ತಾಲೂಕಿನ ಕವಿತಾಳ ಬಾಲಕಿಯರ ಸರ್ಕಾರಿ ಪ್ರೌಢ ಶಾಲೆಯ ಸಹಶಿಕ್ಷಕರಾದ ಪ್ರಾಣೇಶ, ಸಿಂಧನೂರು ಬಾಲಕರ ಸರ್ಕಾರಿ ಪ್ರೌಢ ಶಾಲೆಯ ಸಹಶಿಕ್ಷಕರಾದ ವಾಸಂತಿ ಕೆ., ರಾಯಚೂರಿನ ಸರ್ಕಾರಿ ಪ್ರೌಢ ಶಾಲೆಯ ಸಹಶಿಕ್ಷಕರಾದ ಸಮೀಮುನ್ನಿ ಸಾ ಬೇಗಂ ಅವರಿಗೆ ವಿವಿಧ ಗಣ್ಯರಿಂದ ಪ್ರಶಸ್ತಿ ಪ್ರಧಾನ ಮಾಡಿ, ಗೌರವ ಸಲ್ಲಿಸಲಾಗುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳ್ಳಿಸಿಬೇಕೆಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್