ನವದೆಹಲಿ, 04 ಸೆಪ್ಟೆಂಬರ್(ಹಿ.ಸ.) :
ಆ್ಯಂಕರ್ : ಅಕ್ಟೋಬರ್ 5 ರಂದು ನಡೆಯಲಿರುವ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಟಿಕೆಟ್‌ನಲ್ಲಿ ಸ್ಪರ್ಧಿಸಬಹುದು ಎಂಬ ಊಹಾಪೋಹಗಳ ನಡುವೆಯೇ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರು ಇಂದು ಕಾಂಗ್ರೆಸ್ ಸಂಸದ ಹಾಗೂ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. ಸುಮಾರು 20ನಿಮಿಷಗಳಷ್ಟು ಕಾಲ ಚರ್ಚೆ ನಡೆಸಿದರು.
ಇದಕ್ಕೂ ಮೊದಲು ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರನ್ನು ಭೇಟಿಯಾಗಿದ್ದಾರೆ.
ಅವರು ತಮ್ಮ ಪ್ರಸ್ತುತ ಸ್ಥಾನಗಳಿಗೆ ರಾಜೀನಾಮೆ ನೀಡುವ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಈ ಹಿಂದೆ, ಪ್ಯಾರಿಸ್ ಒಲಿಂಪಿಕ್ಸ್‌ನಿಂದ ಹಿಂದಿರುಗಿದ ನಂತರ, ವಿನೇಶ್ ಫೋಗಟ್ ಅವರು ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರನ್ನು ಭೇಟಿಯಾಗಿದ್ದರು. ಅ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿದ್ದ ಭೂಪಿಂದರ್ ಸಿಂಗ್ ಪಕ್ಷಕ್ಕೆ ಸೇರಲು ಬಯಸುವ ಯಾರನ್ನಾದರೂ ಕಾಂಗ್ರೆಸ್ ಸ್ವಾಗತಿಸುತ್ತದೆ ಎಂದಿದ್ದರು .
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್