ಬೆಂಗಳೂರು, 04ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಕೃಷ್ಣಾದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗದೊಂದಿಗೆ ಅವರ ಬೇಡಿಕೆಗಳ ಕುರಿತು ಸಭೆ ನಡೆಸಿದರು. ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಗೋವಿಂದ ರಾಜು, ವಿಧಾನ ಪರಿಷತ್ ಸದಸ್ಯ ಕೆ.ಎಸ್. ಪುಟ್ಟಣ್ಣ, ಸಾಹಿತಿ ಬರಗೂರು ರಾಮಚಂದ್ರಪ್ಪ, ಡಾ. ನಿರಂಜನಾರಾಧ್ಯ ಮತ್ತಿತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್