ಒಡವೆ ಅಂಗಡಿ ಕಳ್ಳತನ ಪ್ರಕರಣ, ನಾಲ್ವರ ಬಂಧನ
ಹುಬ್ಬಳ್ಳಿ, 05 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಂಗಾರದ ಅಂಗಡಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೇಶ್ವಾಪುರ ಪೋಲೀಸರು ಯಶಸ್ವಿಯಾಗಿದ್ದಾರೆ. ಜು. 17 ರಂದು ಭುವನೇಶ್ವರಿ ನಗರದಲ
Arrest


ಹುಬ್ಬಳ್ಳಿ, 05 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಂಗಾರದ ಅಂಗಡಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೇಶ್ವಾಪುರ ಪೋಲೀಸರು ಯಶಸ್ವಿಯಾಗಿದ್ದಾರೆ.

ಜು. 17 ರಂದು ಭುವನೇಶ್ವರಿ ನಗರದಲ್ಲಿರುವ ಭುವನೇಶ್ವರಿ ಜುವೇಲರಿ ವಕ್ರ್ಸ್ ಎಂಬ ಅಂಗಡಿಯಲ್ಲಿ ಗ್ಯಾಸ್ ಕಟರ್ ಬಳಸಿ ಅಂಗಡಿ ಲಾಕ್ ಮುರಿದು ಲಕ್ಷಾಂತರ ರೂ ಮೌಲ್ಯದ ಬಂಗಾರ ಹಾಗೂ ಬೆಳ್ಳಿ ಆಭರಣಗಳನ್ನು ಕಳ್ಳತನ ಮಾಡಲಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೋಲೀಸರು ಕಮಿಷನರ್ ಅವರ ಮಾರ್ಗದರ್ಶನದಲ್ಲಿ ನಾಲ್ಕು ವಿಶೇಷ ತಂಡಗಳನ್ನು ರಚಿಸಿ ಕಾರ್ಯಾಚರಣೆಗೆ ಇಳಿದಿತ್ತು.

ಬಳಿಕ ಪ್ರಕರಣದ ಮುಖ್ಯ ಆರೋಪಿ ಹಾಗೂ ಅಂತರಾಜ್ಯ ಕಳ್ಳ ಫರಾನ್ ಶೇಖ್ ಎಂಬಾತನನ್ನು ಬಂಧಿಸಿ ತನಿಖೆ ಮುಂದುವರೆಸಿತ್ತು. ಇದೀಗ ಮಹಾರಾಷ್ಟ್ರ, ಗೋವಾ ಸೇರಿದಂತೆ ಮುತ್ತಿತ್ತರ ಕಡೆಗಳಲ್ಲಿ ಹುಡುಗಾಟ ನಡೆಸಿ ಮಹಾರಾಷ್ಟ್ರ ಮೂಲದ ಮುಖೇಶ್ ಅಲಿಯಾಸ್ ರಾಜು ಯಾದವ್, ಫಾತಿಮಾ ಶೇಖ್, ಅಲ್ತಾಬ್ ಅಹ್ಮದ್ ಶೇಖ್, ತಲತ್ ಶೇಖ್ ಎಂಬಾತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನೂ ಆರೋಪಿಗಳಿಂದ 55 ಲಕ್ಷ ರೂ ಮೌಲ್ಯದ 780 ಗ್ರಾಂ ತೂಕದ ಬಂಗಾರದ ಆಭರಣ, 17 ಲಕ್ಷ ರೂ ಮೌಲ್ಯದ 23 ಕೆಜಿ ಬೆಳ್ಳಿ, 10ಸಾವಿರ ನಗದು, ಹಾಗೂ ಕೃತ್ಯಕ್ಕೆ ಬಳಸಿದ ಒಂದು ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಪ್ರಕರಣಕ್ಕೆ ಇನ್ನೂ ಹೆಚ್ಚಿನ ತನಿಖೆ ನಡೆಯುತ್ತಿದ್ದು, ಮತ್ತಷ್ಟು ಜನರ ಬಂಧನ ಸಾಧ್ಯತೆಗಳಿವೆ ಎಂದು ಪೋಲೀಸ್ ಆಯುಕ್ತರು ತಿಳಿಸಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಪಿಎಸ್‍ಐಗಳಾದ ಶರಣ ದೇಸಾಯಿ, ಮಲ್ಲಿಕಾರ್ಜುನ ಹೆಬಸೂರು, ಮಂಜುನಾಥ, ಪುನೀತ್ ಕುಮಾರ್, ರವಿ ವಡ್ಡರ ಸೇರಿದಂತೆ ಸಿಬ್ಬಂದಿಗಳಾದ ಕೃಷ್ಣ ಕಟ್ಟಿಮನಿ, ಬಸವರಾಜ ಕೊಟಬಾಗಿ, ಆನಂದ, ವಿಠ್ಠಲ, ಪ್ರಕಾಶ ರಾಗಿ ಸೇರಿದಂತೆ ಮತ್ತಿತ್ತರ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಇನ್ನೂ ಈ ಬಗ್ಗೆ ಹು-ಧಾ ಪೋಲೀಸ್ ಆಯುಕ್ತ ಎನ್.ಶಶಿಕುಮಾರ್ ಪ್ರತಿಕ್ರಿಯೆ ನೀಡಿದ್ದು, ಜು.17 ರಂದು ನಡೆದ ಜ್ಯುವಲರಿ ಶಾಪ್ ನಲ್ಲಿ ಕಳ್ಳತನ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಐದು ಜನರನ್ನು ಬಂಧಿಸಲಾಗಿದೆ. ಬಂಧಿತರೆಲ್ಲರೂ ಅಂತರಾಜ್ಯ ಆರೋಪಿಗಳಾಗಿದ್ದಾರೆ.

ಇಷ್ಟು ದೊಡ್ಡ ಮೊತ್ತದ ಪ್ರಕರಣವನ್ನು ಬೇಧಿಸಿದ ಇಲಾಖೆಯ ಸಿಬ್ಬಂದಿಗಳ ಕಾರ್ಯ ಮೆಚ್ಚುವಂತಹದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಆರೋಪಿಗಳನ್ನು ಬಂಧಿಸಲಾಗುವುದು. ಅಷ್ಟೇ ಅಲ್ಲದೇ ಜ್ಯುವೆಲರಿ ಮಾಲೀಕರು ಸಹ ಮುನ್ನೆಚ್ಚರಿಕೆ ಕ್ರಮವಾಗಿ ಸಿಸಿಟಿವಿ ಸೇರಿದಂತೆ ಸೆಕ್ಯುರಿಟಿ ನಿಯೋಜಿಸಿಕೊಳ್ಳಬೇಕೆಂದು ಸಲಹೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande