ಸಿಂಗಾಪುರ ಅಧ್ಯಕ್ಷರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಭೆ
ಸಿಂಗಾಪುರ, 05 ಸೆಪ್ಟೆಂಬರ್(ಹಿ.ಸ.) : ಆ್ಯಂಕರ್ : ಸಿಂಗಾಪುರ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಪ್ರಧಾನಿ ಲಾವ್ರೇನ್ಸ್ ವಾಂಗ್ ಅವರೊಂದಿಗೆ ನಿನ್ನೆ ದ್ವಿಪಕ್ಷೀಯ ಸಮಾಲೋಚನೆ ನಡೆಸಿದರು. ಉಭಯ ನಾಯಕರು ಪರಸ್ಪರ ಹಿತಾಸಕ್ತಿಯ ಜಾಗತಿಕ ವಿಷಯಗಳು, ಪ್ರಾದೇಶಿಕ ಪರಿಸ್ಥಿತಿ, ಎರಡೂ ದೇಶಗಳ ನಡುವ
Singapore, held delegation-level talks


ಸಿಂಗಾಪುರ, 05 ಸೆಪ್ಟೆಂಬರ್(ಹಿ.ಸ.) :

ಆ್ಯಂಕರ್ : ಸಿಂಗಾಪುರ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಪ್ರಧಾನಿ ಲಾವ್ರೇನ್ಸ್ ವಾಂಗ್ ಅವರೊಂದಿಗೆ ನಿನ್ನೆ ದ್ವಿಪಕ್ಷೀಯ ಸಮಾಲೋಚನೆ ನಡೆಸಿದರು. ಉಭಯ ನಾಯಕರು ಪರಸ್ಪರ ಹಿತಾಸಕ್ತಿಯ ಜಾಗತಿಕ ವಿಷಯಗಳು, ಪ್ರಾದೇಶಿಕ ಪರಿಸ್ಥಿತಿ, ಎರಡೂ ದೇಶಗಳ ನಡುವಿನ ಕಾರ್ಯತಂತ್ರ ಸಹಭಾಗಿತ್ವದ ಪ್ರಗತಿ ಕುರಿತು ಚರ್ಚಿಸಿದರು.

ಬ್ರೂನೈ ಪ್ರವಾಸ ಪೂರ್ಣಗೊಳಿಸಿ ಸಿಂಗಾಪುರಕ್ಕೆ ನಿನ್ನೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭವ್ಯ ಸ್ವಾಗತ ದೊರೆಯಿತು. ಅಲ್ಲಿನ ಪ್ರಧಾನಿ ಅವರು, ಆಯೋಜಿಸಿದ್ದ ಭೋಜನಕೂಟದಲ್ಲಿ ಪಾಲ್ಗೊಂಡರು. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಸಿಂಗಾಪುರ ಪ್ರಧಾನಿಯವರೊಂದಿಗೆ ವಿಸ್ತೃತ ಮಾತುಕತೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

ಇಂದು ಪ್ರಧಾನಿ ನರೇಂದ್ರ ಮೋದಿ ಅವರು, ಸಿಂಗಾಪುರ ಅಧ್ಯಕ್ಷರು ಹಾಗೂ ಇತರ ಗಣ್ಯರೊಂದಿಗೆ ಚರ್ಚಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಎಇಎಂ ಸೆಮಿಕಂಡಕ್ಟರ್ ಸೌಲಭ್ಯ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಸಿಂಗಾಪುರದ ವಿವಿಧ ಕಂಪನಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೂ ಅವರು ಚರ್ಚಿಸಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande