ಹೆಣ್ಣು ಮಗುವಿಗೆ ಜನ್ಮ ನೀಡಿದ ಮಿಲನಾ ನಾಗರಾಜ್
ಬೆಂಗಳೂರು, 05 ಸೆಪ್ಟೆಂಬರ್(ಹಿ.ಸ.) : ಆ್ಯಂಕರ್ : ಲವ್‌ ಮಾಕ್ಟೇಲ್ ಚಲನಚಿತ್ರದ ಖ್ಯಾತಿಯ ಮಿಲನಾ ನಾಗರಾಜ್ ಹಾಗೂ ಡಾರ್ಲಿಂಗ್ ಕೃಷ್ಣ ಇದೀಗ ಈ ಸ್ಟಾರ್​ ಜೋಡಿ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದೆ. ಇಂದು ಮುಂಜಾನೆ ನಟಿ ಮಿಲನಾ ನಾಗರಾಜ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಖುಷಿಯನ್ನು ಡಾರ್ಲಿ
ಹೆಣ್ಣು ಮಗುವಿಗೆ ಜನ್ಮ ನೀಡಿದ ಮಿಲನಾ ನಾಗರಾಜ್


ಬೆಂಗಳೂರು, 05 ಸೆಪ್ಟೆಂಬರ್(ಹಿ.ಸ.) :

ಆ್ಯಂಕರ್ : ಲವ್‌ ಮಾಕ್ಟೇಲ್ ಚಲನಚಿತ್ರದ ಖ್ಯಾತಿಯ ಮಿಲನಾ ನಾಗರಾಜ್ ಹಾಗೂ ಡಾರ್ಲಿಂಗ್ ಕೃಷ್ಣ ಇದೀಗ ಈ ಸ್ಟಾರ್​ ಜೋಡಿ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದೆ. ಇಂದು ಮುಂಜಾನೆ ನಟಿ ಮಿಲನಾ ನಾಗರಾಜ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಖುಷಿಯನ್ನು ಡಾರ್ಲಿಂಗ್ ಕೃಷ್ಣ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಮೊದಲ ಮಗುವನ್ನು ಪಡೆದುಕೊಂಡು ಡಾರ್ಲಿಂಗ್ ಕೃಷ್ಣ ಕುಟುಂಬ ಸಂಭ್ರಮದಲ್ಲಿದೆ. ಸಹಜ ಹೆರಿಗೆ ಮೂಲಕ ಮಿಲನಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮಗಳು ಬಂದಿರುವುದು ಬಹಳ ಖುಷಿ ನೀಡಿದೆ. ತಾಯಿ ಮತ್ತು ಮಗಳು ಆರೋಗ್ಯವಾಗಿದ್ದಾರೆ.

ಈ ಜೀವನ ಪಯಣದಲ್ಲಿ ಮಿಲನಾ ನಾಗರಾಜ್ ಅನುಭವಿಸಿದ ನೋವು, ಮಾಡಿದ ತ್ಯಾಗ, ತೋರಿದ ಧೈರ್ಯದ ಬಗ್ಗೆ ನನಗೆ ಹೆಮ್ಮೆ ಇದೆ. ಈ ಪಯಣದಲ್ಲಿ ಸಾಗುವ ಎಲ್ಲ ತಾಯಂದಿರಿಗೆ ನನ್ನ ಸೆಲ್ಯೂಟ್. ಇದನ್ನು ನೋಡಿ ನನಗೆ ಮಹಿಳೆಯರ ಮೇಲೆ ಇದ್ದ ಗೌರವ ದುಪ್ಪಟ್ಟಾಗಿದೆ. ಇಂದು ಮಗಳು ಜನಿಸಿರೋದು ನನಗೆ ಹೆಮ್ಮೆಯಿದೆ. ನಾನೊಬ್ಬ ಅದೃಷ್ಟವಂತ ತಂದೆ” ಎಂದು ಡಾರ್ಲಿಂಗ್ ಕೃಷ್ಣ ಪೋಸ್ಟ್ ಮಾಡಿ ಸಂತಸ ಹಂಚಿಕೊಂಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande