ಬ್ಯಾಂಕ್ ದರೋಡೆಗೆ ಯತ್ನ ಒರ್ವನ ಬಂಧನ
ಹುಬ್ಬಳ್ಳಿ, 06 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್:ಹುಬ್ಬಳ್ಳಿಯ ಅಮರಗೋಳ ಎಪಿಎಂಸಿಯಲ್ಲಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಪರಿಚಿತ ವ್ಯಕ್ತಿಯೋರ್ವನು ಬ್ಯಾಂಕಿನ ಹಣವನ್ನು ಲೂಟಿ ಮಾಡಲು ಯತ್ನಿಸಿದ್ದಾನೆ. ಮುಖಕ್ಕೆ ಮಾಸ್ಕ್ ಹಾಕಿಕೊಂಡು ಕೈಯಲ್ಲಿ ಚಾಕು ಹಿಡಿದುಕೊಂಡು ಬ್ಯಾಂಕ್ ನೌಕರರೊಬ್ಬರ ಕುತ್ತ
Arresr1


Arrest


ಹುಬ್ಬಳ್ಳಿ, 06 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:ಹುಬ್ಬಳ್ಳಿಯ ಅಮರಗೋಳ ಎಪಿಎಂಸಿಯಲ್ಲಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಪರಿಚಿತ ವ್ಯಕ್ತಿಯೋರ್ವನು ಬ್ಯಾಂಕಿನ ಹಣವನ್ನು ಲೂಟಿ ಮಾಡಲು ಯತ್ನಿಸಿದ್ದಾನೆ.

ಮುಖಕ್ಕೆ ಮಾಸ್ಕ್ ಹಾಕಿಕೊಂಡು ಕೈಯಲ್ಲಿ ಚಾಕು ಹಿಡಿದುಕೊಂಡು ಬ್ಯಾಂಕ್ ನೌಕರರೊಬ್ಬರ ಕುತ್ತಿಗೆಗೆ ಚಾಕು ಹಿಡಿದು, ಪ್ರಾಣ ಬೆದರಿಕೆ ಒಡ್ಡಿ '10 ಲಕ್ಷ ರೂ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾನೆ. ಇದೇ ವೇಳೆ ಕ್ಯಾಶ್ ಕೌಂಟರ್ ಬಳಿ ನೌಕರನ ರಕ್ಷಣೆಗೆ ಸಿಬ್ಬಂದಿ ಮುಂದಾದಾಗ ಅವರನ್ನು ತಳ್ಳಿ ಪರಾರಿಯಾಗಿದ್ದ. ಈ ಕುರಿತು ಎಪಿಎಂಸಿ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೂಡಲೇ ಕಾರ್ಯಪ್ರವತ್ತರಾದ ಪೋಲಿಸರು ಎಪಿಎಂಸಿ ಪೊಲೀಸ್ ಠಾಣೆಯ ಪಿಐ ಸಮಿವುಲ್ಲಾ ಕೆ ಮತ್ತು ಸಿಬ್ಬಂದಿಗಳನ್ನು ಒಳಗೊಂಡ ತಂಡವು ಬ್ಯಾಂಕ್ ಸಿಬ್ಬಂದಿಗಳ ಸಹಾಯದಿಂದ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬ್ಯಾಂಕ್ ದರೋಡೆಗೆ ಯತ್ನಿಸಿದವನನ್ನು ಬಂದಿಸಿದ್ದಾರೆ. ಆರೋಪಿ ಗೋಪನಕೊಪ್ಪ ನಿವಾಸಿಯಾದ ಮಂಜುನಾಥ್ ಹಬೀಬ್ (28 ವರ್ಷ ) ಬಂಧಿತನಾಗಿದ್ದು ಆರೋಪಿಯಿಂದ ದರೋಡೆಗೆ ಬಳಸಿದ್ದ ಎರಡು ಚಾಕು, ಬ್ಯಾಗ್ ಗಳನ್ನು ವಶಕ್ಕೆ ಪಡೆಯಲಾಗಿದೆ.

ವಿಚಾರಣೆ ವೇಳೆ ಆರೋಪಿಯು ಷೇರು ಮಾರುಕಟ್ಟೆಯಲ್ಲಿ ಹಣವನ್ನು ಕಳೆದುಕೊಂಡು ಆರ್ಥಿಕ ಸಂಕಷ್ಟಕ್ಕೆ ಸಿಲುಕ್ಕಿದ್ದರಿಂದ ಈ ದರೋಡೆ ಕೃತ್ಯಕ್ಕೆ ಮುಂದಾಗಿದ್ದಾಗಿ ಒಪ್ಪಿಕೊಂಡಿದ್ದಾನೆ. ಎಪಿಎಂಸಿ ಠಾಣೆ ಪೋಲಿಸರು ಆರೋಪಿಯ ವಿರುದ್ಧ ಸೂಕ್ತ ಕಾನೂನು ಜರುಗಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande