ಕೀನ್ಯಾ ಶಾಲೆಯಲ್ಲಿ ಅಗ್ನಿ ಅವಘಡ – 17 ಮಕ್ಕಳು ದಾರುಣ ಸಾವು
ನೈರೋಬಿ, 07 ಸೆಪ್ಟೆಂಬರ್(ಹಿ.ಸ.) : ಆ್ಯಂಕರ್ : ಕೀನ್ಯಾ ಶಾಲೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 17 ಮಕ್ಕಳು ಸಾವನ್ನಪ್ಪಿದ್ದಾರೆ. 70 ಮಂದಿ ಕಾಣೆಯಾಗಿದ್ದಾರೆ.ಕೀನ್ಯಾದ ಪ್ರಾಥಮಿಕ ವಸತಿ ಶಾಲೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನಾ ಸ್ಥಳದಲ್ಲಿ ಸುದ್ದಿಗಾರರೊಂ
,7 ಸೆಪ್ಟೆಂಬರ್(ಹಿ.ಸ.): ಆ್ಯಂಕರ್ :


ನೈರೋಬಿ, 07 ಸೆಪ್ಟೆಂಬರ್(ಹಿ.ಸ.) :

ಆ್ಯಂಕರ್ : ಕೀನ್ಯಾ ಶಾಲೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 17 ಮಕ್ಕಳು ಸಾವನ್ನಪ್ಪಿದ್ದಾರೆ. 70 ಮಂದಿ ಕಾಣೆಯಾಗಿದ್ದಾರೆ.ಕೀನ್ಯಾದ ಪ್ರಾಥಮಿಕ ವಸತಿ ಶಾಲೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನಾ ಸ್ಥಳದಲ್ಲಿ ಸುದ್ದಿಗಾರರೊಂದಿಗೆ ಉಪಾಧ್ಯಕ್ಷೆ ರಿಗತಿ ಗಚಾಗುವಾ ಮಾತನಾಡಿ, ನೈರಿ ಕೌಂಟಿಯಲ್ಲಿರುವ ಹಿಲ್ ಸೈಡ್ ಎಂಡರಾಶಾ ಅಕಾಡೆಮಿಯಲ್ಲಿ ಮಧ್ಯರಾತ್ರಿ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಆ ಸಮಯದಲ್ಲಿ ಕೊಠಡಿಯಲ್ಲಿ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮಲಗಿದ್ದರು ಎಂದು ತಿಳಿದು ಬಂದಿದೆ. ಅದರಲ್ಲಿ 17 ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 70 ಮಂದಿ ಸುಳಿವು ದೊರೆತಿಲ್ಲ ಎಂದು ತಿಳಿಸಿದ್ದಾರೆ.ರಾಷ್ಟ್ರೀಯ ಪೊಲೀಸ್ ವಕ್ತಾರ ರೆಸಿಲಿಯಾ ಮಾತನಾಡಿ, ಈಗಾಗಲೇ 17 ಮೃತದೇಹಗಳು ಪತ್ತೆಯಾಗಿದ್ದು, ಗುರುತಿಸಲಾಗದಷ್ಟು ಸುಟ್ಟು ಹೋಗಿವೆ. ಇನ್ನೂ ಕಾಣೆಯಾದವರನ್ನು ಪತ್ತೆಹಚ್ಚುವಂತೆ ಮನೆಯವರು ಹಾಗೂ ಸಂಬಂಧಿಕರು ಒತ್ತಾಯ ಹೇರುತ್ತಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande