ವೈಸಳ ಹಾಗೂ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗಾಗಿ ಅರ್ಜಿಗಳ ಆಹ್ವಾನ
ವೈಸಳ ಹಾಗೂ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗಾಗಿ ಅರ್ಜಿಗಳ ಆಹ್ವಾನ
ವೈಸಳ ಹಾಗೂ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗಾಗಿ ಅರ್ಜಿಗಳ ಆಹ್ವಾನ


ಕೋಲಾರ, ಸೆಪ್ಟೆಂಬರ್ ೦೭ (ಹಿ.ಸ) :

ಆ್ಯಂಕರ್ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಕ್ಕಳ ದಿನಾಚರಣೆ-೨೦೨೪ರ ಪ್ರಯುಕ್ತ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ ೬ ರಿಂದ ೧೮ ವರ್ಷದೊಳಗಿನ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತದೆ. ಪ್ರಕರಣವು ಆಗಸ್ಟ್ ೦೧, ೨೦೨೩ ರಿಂದ ಜುಲೈ ೩೧, ೨೦೨೪ ರೊಳಗೆ ನಡೆದಿರಬೇಕು. ಆಗಸ್ಟ್ ೦೧, ೨೦೦೬ ರಂದು ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ.೧೦೦೦೦ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.

ಇದೇ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ ೫ ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ ರೂ.೨೫೦೦೦ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ.೧೦೦೦೦೦ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುವುದು.

ಪ್ರಸಕ್ತ ಸಾಲಿನ ಪ್ರಶಸ್ತಿಗಾಗಿ ಕಛೇರಿಯಿಂದ ಪಡೆದು ಸೆಪ್ಟೆಂಬರ್ ೧೭ ರೊಳಗೆ ಅರ್ಜಿಗಳನ್ನು ಕನ್ನಡ ಭಾಷೆಯಲ್ಲಿ ಸಲ್ಲಿಸಬಹುದು. ನಿಗಧಿತ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.೦೮೧೫೨-೨೨೨೭೫೩, ೨೨೩೬೬೫, ೯೬೬೩೨೯೪೪೧೫ ಯನ್ನು ಸಂಪರ್ಕಿಸಬಹುದು ಎಂದು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande