ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಿ0ದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಅಭಿಯಾನ
ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಿ0ದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಅಭಿಯಾನ
ಕೋಲಾರದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಿ0ದ ವಿದ್ಯಾರ್ಥಿಗಳು ಪರಿಸರಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿದರು.


ಸ್ಕೌಟ್ಸ್ ಸಂಸ್ಥೆಯ ತರಬೇತಿದಾರರಾದ ಬಾಬು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುತ್ತಿರುವುದು.


ಪರಿಸರ ಸ್ನೇಹಿ ಗಣೇಶ ಮೂರ್ತಿಯನ್ನು ಪ್ರದರ್ಶಿಸಿರುವ ವಿದ್ಯಾರ್ಥಿನಿ.


ಕೋಲಾರದ ರವಿ ಬಿ.ಇಡಿ ಕಾಲೇಜಿನ ವಿದ್ಯಾರ್ಥಿಗಳು ಪರಸರ ಸ್ನೇಹಿ ಗಣಪತಿ ಮೂರ್ತಿಗಳನ್ನು ಪ್ರದರ್ಶಿಸಿದರು.


ಕೋಲಾರ, ಸೆಪ್ಟೆಂಬರ್ ೦೭ (ಹಿ.ಸ) :

ಆ್ಯಂಕರ್ : ಎಲ್ಲೆಡೆ ಗಣೇಶ ಚತುರ್ಥಿಯ ಸಂಭ್ರಮ ಮನೆ ಮಾಡಿದೆ. ವಿಘ್ನ ನಿವಾರಕ ಗಣೇಶನನ್ನು ಮನೆಮೆನಯಲ್ಲೂ ಅಲ್ಲದೆ ಸಾರ್ವಜನಿಕವಾಗಿ ಪೂಜಿಸಲಾಗುವುದು. ಎಲ್ಲರೂ ಭಕ್ತಿ ಪೂರ್ವಕವಾಗಿ ಗಣೇಶ ಚರ್ತುಥಿಯನ್ನು ಆಚರಿಸಿದ್ದಾರೆ. ಆದರೆ ಪರಿಸರಕ್ಕೆ ಮಾರಕವಾದ ಪಿಓಪಿ ಗಣೇಶ ಮೂರ್ತಿಗಳ ಮಾರಾಟವನ್ನು ನಿಷೇಧಿಸಲಾಗಿದೆ. ಆದರೂ ಪಿ.ಒ.ಪಿ ಗಣೇಶಗಳ ಮಾರಾಟ ಎಂದಿನ0ತೆ ಮುಂದುವರೆದಿದೆ. ಮಣ್ಣಲ್ಲಿ ಮಣ್ಣಾಗದ ಹಾಗೂ ನೀರಿನಲ್ಲಿ ಕರಗದ ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ ವಿದ್ಯಾರ್ಥಿಗಳ ಮೂಲಕ ಸಂದೇಶ ಸಾರುವ ಅಭಿಯಾನವನ್ನು ಕೋಲಾರದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಯಶಸ್ವಿಯಾಗಿ ಕೈಗೊಂಡಿದೆ.

ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಕೈಗೊಂಡ ಅಭಿಯಾನದಲ್ಲಿ ಭಾಗವಹಿಸಿದ ಸಾವಿರಾರು ಮಂದಿ ವಿದ್ಯಾರ್ಥಿಗಳು ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ ಮನೆಗಳಲ್ಲಿ ಪೂಜೆ ಸಲ್ಲಿಸಿದ್ದಾರೆ. ಅಲ್ಲದೆ ಪ್ರತಿ ವಿದ್ಯಾರ್ಥಿಯು ೫ ಗಣೇಶ ಮೂರ್ತಿಗಳನ್ನು ತಯಾರಿಸಿ ಅಕ್ಕಪಕ್ಕದವರಿಗೆ ನೀಡಿ ಪರಿಸರ ಸ್ನೇಹಿ ಗಣೇಶ ಚತುರ್ಥಿಯನ್ನು ಆಚರಿಸುವಂತೆ ಮನವಿ ಮಾಡಿದ್ದಾರೆ.

ಸ್ವಾತಂತ್ರ‍್ಯ ಪೂರ್ವದಲ್ಲಿ ಜನರ ನಡುವೆ ಸಾಮರಸ್ಯ ಮೂಡಿಸಲು ಮತ್ತು ಸ್ವಾತಂತ್ರ‍್ಯ ಸಂಗ್ರಾಮದಲ್ಲಿ ಜನರು ಪಾಲ್ಗೊಳ್ಳುವ ಉದ್ದೇಶದಿಂದ ಲೋಕ ಮಾನ್ಯ ಬಾಲಗಂಗಾಧರ ತಿಲಕರು ಸಾರ್ವಜನಿಕ ಗಣೇಶೋತ್ಸವ ಆರಂಭಿಸಿದರು. ಅಂದಿನ ಕಾಲಘಟ್ಟದಲ್ಲಿ ಗಣೇಶೋತ್ಸವ ಜನರನ್ನು ಬೆಸೆಯುವ ಧಾರ್ಮಿಕ ಚಳುವಳಿಯಾಗಿತ್ತು. ಆದರೆ ಇಂದಿನ ಕಾಲಘಟ್ಟದಲ್ಲಿ ಗಣೇಶೋತ್ಸವ ಉದ್ಯಮವಾಗಿ ಬೆಳೆದಿದೆ.

ಪರಿಸರಕ್ಕೆ ಹಾನಿಯಾಗುವ ಮಣ್ಣಲ್ಲಿ ಮಣ್ಣಾಗದ ನೀರಿನಲ್ಲಿ ಕರಗದ ಪಿಓಪಿ ಮತ್ತು ರಾಸಾಯನಿಕ ಬಣ್ಣಗಳನ್ನು ಬಳಸಿ ತಯಾರಿಸಲಾದ ಗಣೇಶ ಮೂರ್ತಿಗಳು ಮಾರಾಟವಾಗುತ್ತಿವೆ. ಪಿಓಪಿ ಗಣೇಶ ಮೂರ್ತಿಗಳ ಬದಲು ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸುವ ತರಬೇತಿಯನ್ನು ವಿದ್ಯಾರ್ಥಿಗಳಿಗೆ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ನೀಡಿದೆ. ಅಕ್ಕಿ, ಗೋದಿ ಹಿಟ್ಟು ಹಾಗೂ ಅರಿಶಿನ ಬಳಸಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸುವ ತರಬೇತಿಯನ್ನು ವಿದ್ಯಾರ್ಥಿಗಳಿಗೆ ನೀಡಲಾಗಿದೆ. ವಿದ್ಯಾರ್ಥಿಗಳ ಮೂಲಕ ಪರಿಸರ ಉಳಿಸುವ ಬಗ್ಗೆ ಸಂದೇಶ ಸಾರಲಾಗಿದೆ.

ಅಕ್ಕಿ, ಗೋದಿ ಹಿಟ್ಟು, ಅರಿಶಿನ ಬಳಸಿ ತಯಾರಿಸಲಾದ ಗಣೇಶ ಮೂರ್ತಿಯನ್ನು ಪೂಜೆಯ ನಂತರ ವಿಸರ್ಜಿಸಲಾಗುವುದಿಲ್ಲ. ಬದಲಾಗಿ ಮನೆಯ ಕೈತೋಟಕ್ಕೆ ಗೊಬ್ಬರವಾಗಿ ಬಳಕೆ ಮಾಡಲಾಗುತ್ತಿದೆ. ಕೋಲಾರದ ಮಹಿಳಾ ಸಮಾಜ ಶಾಲೆಯ ವಿದ್ಯಾರ್ಥಿ ದೇವರಾಜ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಿ0ದ ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಿಸುವ ಬಗ್ಗೆ ತರಬೇತಿ ನೀಡಿದ್ದಾರೆ. ಅಕ್ಕಿ, ಗೋದಿ ಹಿಟ್ಟು ಹಾಗೂ ಅರಿಶಿನದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಬಹುದಾಗಿದೆ. ಪೂಜೆ ನಂತರ ನೀರಿನಲ್ಲಿ ವಿಸರ್ಜನೆ ಮಾಡದೆ ಗಿಡಗಳಿಗೆ ಗೊಬ್ಬರವಾಗಿ ಬಳಕೆ ಮಾಡುವುದಾಗಿ ತಿಳಿಸಿದರು.

ಕೋಲಾರದ ರವಿ ಬಿಎಡ್ ಕಾಲೇಜಿನ ವಿದ್ಯಾರ್ಥಿನಿ ಸುಷ್ಮಾ, ಪಿಓಪಿ ಗಣೇಶ ಮೂರ್ತಿ ನೀರಿನಲ್ಲಿ ಕರಗುವುದಿಲ್ಲ. ನೀರಿನಲ್ಲಿ ವಿಸರ್ಜನೆ ಮಾಡಿದಾಗ ಪ್ರಾಣಿ ಪಕ್ಷಿಗಳು ಹಾಗೂ ಮನುಷ್ಯನಿಗೆ ಆ ನೀರು ಹಾನಿಯಾಗುತ್ತದೆ. ಪರಿಸರಕ್ಕೆ ಆಗುವ ಹಾನಿಯನ್ನು ತಡೆಯುವ ಉದ್ದೇಶದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಯನ್ನು ತಯಾರಿಸಲಾಗಿದೆ ಎಂದು ತಿಳಿಸಿದರು.

ಸ್ಕೌಟ್ಸ್ ಸಂಸ್ಥೆಯ ತರಬೇತುದಾರ ಬಾಬು, ಸ್ಕೌಟ್ಸ್ ಸಂಸ್ಥೆ ಪರಿಸರಕ್ಕೆ ಪೂರಕವಾದ ಕೆಲಸಗಳನ್ನು ಮಾಡುತ್ತಿದೆ. ಪರಿಸರ ಗಣೇಶ ತಯಾರು ಮಾಡುವ ಬಗ್ಗೆ ವಿದ್ಯಾರ್ಥಿಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಪ್ರತಿ ವಿದ್ಯಾರ್ಥಿ ಐದು ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ ಅಕ್ಕಪಕ್ಕದವರಿಗೆ ನೀಡುತ್ತಾನೆ. ಈಗಾಗಲೇ ೧೬೦೦ ಮಂದಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗಿದೆ. ವಿದ್ಯಾರ್ಥಿಗಳ ಮೂಲಕ ಪೋಷಕರು ಮತ್ತು ಸಾರ್ವಜನಿಕರಿಗೆ ಪರಿಸರ ಸ್ನೇಹಿತ ಗಣೇಶ ಮೂರ್ತಿಗಳನ್ನು ಬಳಸುವಂತೆ ಅರಿವು ನೀಡಲಾಗುತ್ತಿದೆ. ಕಳೆದ ೫ ವರ್ಷಗಳಿಂದ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ವಿದ್ಯಾರ್ಥಿಗಳಿಗೆ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸುವ ತರಬೇತಿ ನೀಡಿದೆ ಎಂದು ವಿವರಿಸಿದರು.

ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಮಹಿಳಾ ಆಯುಕ್ತೆ ನವೀನ, ಗಣೇಶ ವಿಸರ್ಜನೆ ಸಮಯದಲ್ಲಿ ಡಿಜೆ ಧ್ವನಿ ವರ್ಧಕ ಬಳಸಲಾಗುತ್ತದೆ. ಡಿಜೆ ಶಬ್ದದಿಂದ ಶಬ್ದ ಮಾಲಿನ್ಯವಾಗಿ ವಿದ್ಯಾರ್ಥಿಗಳು ಮತ್ತು ರೋಗಿಗಳಿಗೆ ತೊಂದರೆಯಾಗುತ್ತದೆ. ವಿಸರ್ಜನೆ ಸಮಯದಲ್ಲಿ ಹಾನಿಕಾರಕ ರಾಸಾಯನಿಕ ಪಟಾಕಿಗಳನ್ನು ಸಿಡಿಸಲಾಗುತ್ತದೆ. ಇದರಿಂದಾಗಿ ಶಬ್ದ ಮತ್ತು ವಾಯು ಮಾಲಿನ್ಯವಾಗಿ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ತಿಳಿಸಿದರು.

ಕೋಲಾರ ಜಿಲ್ಲಾ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ರಾಜು, ಪಿಓಪಿ ಮತ್ತು ರಾಸಾಯನಿಕ ಬಣ್ಣಗಳನ್ನು ಬಳಸಿ ತಯಾರಿಸಿದ ಗಣಪತಿಗಳನ್ನು ನೀರಿನಲ್ಲಿ ವಿಸರ್ಜನೆ ಮಾಡಿದರೆ ನೀರು ಬಳಕೆಗೆ ಯೋಗ್ಯವಲ್ಲದ ರೀತಿಯಲ್ಲಿ ಮಾಲಿನ್ಯವಾಗುತ್ತದೆ. ಪಿಓಪಿ ನೀರಿನಲ್ಲಿ ಕರಗುವುದಿಲ್ಲ. ವಿಸರ್ಜನೆ ನಂತರ ಪಿಓಪಿ ಗಣಪತಿಗಳು ಕರಗದ ಕಾರಣ ಕಸದ ರೀತಿಯಲ್ಲಿ ವಿಲೇವಾರಿ ಮಾಡಲಾಗುತ್ತದೆ. ಇದರಿಂದಾಗಿ ತೀವ್ರತರದ ಪರಿಸರ ಮಾಲಿನ್ಯವಾಗುತ್ತದೆ ಎಂದು ತಿಳಿಸಿದರು.

ವರ್ಷದಿಂದ ವರ್ಷಕ್ಕೆ ಪಿಓಪಿ ಗಣಪತಿಗಳ ಬಳಕೆ ಹೆಚ್ಚುತ್ತಿದೆ. ಪಿಓಪಿ ಗಣಪತಿಗಳ ಬದಲು ಪರಿಸರ ಸ್ನೇಹಿ ಗಣಪತಿಗಳ ಬಳಕೆ ಮಾಡಿ ಪರಿಸರವನ್ನು ಉಳಿಸುವ ಕೆಲಸ ಮಾಡಬೇಕಿದೆ.

ಚಿತ್ರ :

೧)ಕೋಲಾರದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಿ0ದ ವಿದ್ಯಾರ್ಥಿಗಳು ಪರಿಸರಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿದರು.

೨)ಸ್ಕೌಟ್ಸ್ ಸಂಸ್ಥೆಯ ತರಬೇತಿದಾರರಾದ ಬಾಬು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುತ್ತಿರುವುದು.

೩)ಪರಿಸರ ಸ್ನೇಹಿ ಗಣೇಶ ಮೂರ್ತಿಯನ್ನು ಪ್ರದರ್ಶಿಸಿರುವ ವಿದ್ಯಾರ್ಥಿನಿ.

೪)ಕೋಲಾರದ ರವಿ ಬಿ.ಇಡಿ ಕಾಲೇಜಿನ ವಿದ್ಯಾರ್ಥಿಗಳು ಪರಸರ ಸ್ನೇಹಿ ಗಣಪತಿ ಮೂರ್ತಿಗಳನ್ನು ಪ್ರದರ್ಶಿಸಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande