ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ದತಿ ನಿರ್ಮೂಲನೆಯ ಬಗ್ಗೆ ಅರಿವು ಮೂಡಿಸಲು ಜಿಲ್ಲಾಧಿಕಾರಿ ಕರೆ
ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ದತಿ ನಿರ್ಮೂಲನೆಯ ಬಗ್ಗೆ ಅರಿವು ಮೂಡಿಸಲು ಜಿಲ್ಲಾಧಿಕಾರಿ ಕರೆ
ಬಾಲ ಕಾರ್ಮಿಕ ಪದ್ದತಿ ನಿರ್ಮೂಲನೆಯ ಬಗ್ಗೆ ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಅಧಿಕಾರಿಗಳ ಸಭೆ ನಡೆಸಿದರು.


ಕೋಲಾರ, ಸೆಪ್ಟೆಂಬರ್ ೦೭ (ಹಿ.ಸ) :

ಆ್ಯಂಕರ್ : ಜಿಲ್ಲಾ ಕಾರ್ಯಪಡೆಯ ಅಧಿಕಾರಿಗಳು ಹಾಗೂ ಸೆಕ್ಷನ್ ೧೭ರ ಅಡಿಯಲ್ಲಿ ಬರುವಂತಹ ಎಲ್ಲಾ ಅಧಿಕಾರಿಗಳು ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ದಾಳಿಯಲ್ಲಿ ಭಾಗವಹಿಸುವುದು ಹಾಗೂ ರಕ್ಷಣೆ ಮಾಡಿದಂತಹ ಮಕ್ಕಳಿಗೆ ಮೊರಾರ್ಜಿದೇಸಾಯಿ, ಅಲ್ಪಸಂಖ್ಯಾತರ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ವಸತಿ ಶಾಲೆಗಳಿಗೆ ದಾಖಲಿಸಬೇಕು ಎಂದು ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳಾದ ಅಕ್ರಂ ಪಾಷ ಅವರು ತಿಳಿಸಿದರು.

ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ಕೋಲಾರದ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ & ಜಿಲ್ಲಾ ಕಾರ್ಯಪಡೆ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಬೈಲಾ ನವೀಕರಿಸುವ ಬಗ್ಗೆ ಚರ್ಚಿಸಿದರು ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ಕಾರ್ಯಕ್ಷಮತೆಯ ಆಧಾರದ ಮೇಲೆ ಮುಂದುವರೆಸಲು ತಿಳಿಸಿದರು.

ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ದತಿ ನಿರ್ಮೂಲನೆಯ ಬಗ್ಗೆ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಮಾಡಿ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಹಾಗೂ ಸೆಕ್ಷನ್ ೧೬ & ೧೭ರ ನಿರೀಕ್ಷಕರು ಬಾಲಕಾರ್ಮಿಕರ ಹಾಗೂ ಕಿಶೋರ ಕಾರ್ಮಿಕರ ದಾಳಿಯಲ್ಲಿ ಪಾಲ್ಗೊಂಡು ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿ ಮಾಡುವಲ್ಲಿ ಎಲ್ಲಾ ಅಧಿಕಾರಿಗಳು ಶ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕರು ಮಾತನಾಡಿ ಪ್ಯಾನ್ ಇಂಡಿಯಾ ರಿಸೋರ್ಸ್ ಅನದ ರೆಹ್ಯಾಬಿಲಿಟೇಷನ್ ಕ್ಯಾಂಪೈನ್ ಸಂಬAಧಿಸಿದAತೆ ದಿನಾಂಕ: ೦೧-೦೪-೨೦೨೪ ರಿಂದ ೩೧-೦೮-೨೦೨೪ ರವರೆಗೆ ಬಾಲಕಾರ್ಮಿಕ & ಕಿಶೋರ ಕಾರ್ಮಿಕರ ದಾಳಿಯಲ್ಲಿ ೦೪ ಬಾಲ ಕಾರ್ಮಿಕರು ಹಾಗೂ ೦೬ ಕಿಶೋರ ಕಾರ್ಮಿಕರನ್ನು ಪತ್ತೆಹಚ್ಚಿ ಪುನರ್ವಸತಿ ಕಲ್ಪಿಸಲಾಗಿದೆ ಎಂದರು.

ಸಭೆಯಲ್ಲಿ ಕಾರ್ಮಿಕ ಅಧಿಕಾರಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಕಾರ್ಮಿಕ ನಿರೀಕ್ಷಕರು ಸೇರಿದಂತೆ ಮತ್ತಿರರರು ಉಪಸ್ಥಿತರಿದ್ದರು.

ಚಿತ್ರ ; ಬಾಲ ಕಾರ್ಮಿಕ ಪದ್ದತಿ ನಿರ್ಮೂಲನೆಯ ಬಗ್ಗೆ ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಅಧಿಕಾರಿಗಳ ಸಭೆ ನಡೆಸಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande