ಹರಿಯಾಣ ಚುನಾವಣೆ; ಕಾಂಗ್ರೆಸ್‌ನಿಂದ ೩೧ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಚಂಡೀಗಢ, 07 ಸೆಪ್ಟೆಂಬರ್(ಹಿ.ಸ.) : ಆ್ಯಂಕರ್ : ಹರಿಯಾಣ ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ೩೧ ಉಮೇದುವಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪಕ್ಷದ ಹಿರಿಯ ನಾಯಕ ಹಾಗು ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರು, ಗರ್ಹಿ ಸಂಪ್ಳಾ ಕಿಲೋಯ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಹೂಡೆಲ
ಹರಿಯಾಣ ಚುನಾವಣೆ; ಕಾಂಗ್ರೆಸ್‌ನಿಂದ ೩೧ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ


ಚಂಡೀಗಢ, 07 ಸೆಪ್ಟೆಂಬರ್(ಹಿ.ಸ.) :

ಆ್ಯಂಕರ್ : ಹರಿಯಾಣ ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ೩೧ ಉಮೇದುವಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಪಕ್ಷದ ಹಿರಿಯ ನಾಯಕ ಹಾಗು ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರು, ಗರ್ಹಿ ಸಂಪ್ಳಾ ಕಿಲೋಯ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ಹೂಡೆಲ್ ಕ್ಷೇತ್ರದಿಂದ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಉದಯ್‌ಭಾನ್ ಅವರನ್ನು ಕಣಕ್ಕಿಳಿಸಲಾಗಿದೆ. ನಿನ್ನೆ ಕಾಂಗ್ರೆಸ್ ಸೇರಿದ ಕುಸ್ತಿಪಟು ವಿನೇಶ್ ಪೋಗಟ್ ಅವರಿಗೆ ಜುಲಾನಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.

ರಾಜ್ಯದ ಮಾಜಿ ಸಚಿವೆ ಗೀತಾ ಭುಕ್ಕಲ್, ಜಜ್ಜರ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ರೆವಾರಿ ಕ್ಷೇತ್ರದಿಂದ ಹಾಲಿ ಶಾಸಕ ಚಿರಂಜೀವಿ ರಾವ್ ಅವರಿಗೆ ಮತ್ತೆ ಟಿಕೆಟ್ ನೀಡಲಾಗಿದೆ.

ಹರಿಯಾಣ ವಿಧಾನಸಭೆಯ ಎಲ್ಲಾ ೯೦ ಕ್ಷೇತ್ರಗಳಿಗೆ ಅಕ್ಟೋಬರ್ ೫ ರಂದು ಮತದಾನ ನಡೆಯಲಿದೆ

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande