ಮುಂಬೈ, 08 ಸೆಪ್ಟೆಂಬರ್(ಹಿ.ಸ.) :
ಆ್ಯಂಕರ್ :
ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಇಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ನಟಿ ಸಿಹಿ ಸುದ್ದಿ ಕೊಟ್ಟಿದ್ದಾರೆ. ರಣ್‌ವೀರ್ ಸಿಂಗ್ ತಂದೆಯಾದ ಸಂಭ್ರಮದಲ್ಲಿದ್ದಾರೆ.
ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆ ನಟಿ ದೀಪಿಕಾ ಹೆಣ್ಣ ಮಗುವಿಗೆ ಜನ್ಮ ನೀಡಿರುವುದು ಕುಟುಂಬದಲ್ಲಿ ಸಂತಸ ಮೂಡಿಸಿದೆ. ಮಗು ಮತ್ತು ದೀಪಿಕಾ ಇಬ್ಬರೂ ಆರೋಗ್ಯವಾಗಿದ್ದಾರೆ. ನಿನ್ನೆ ಸೆ.7ರಂದು ಸಂಜೆ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಮನೆಗೆ ಪುಟ್ಟ ಗೌರಿಯ ಆಗಮನವಾಗಿದೆ. ಇನ್ನೂ ದೀಪಿಕಾ ಮತ್ತು ರಣ್‌ವೀರ್ ದಂಪತಿ ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್