ಹುಬ್ಬಳ್ಳಿ, 08 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:ಹುಬ್ಬಳ್ಳಿ ತಾಲ್ಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಬಡಿದಾಡಿಕೊಂಡ ಘಟನೆ ಶನಿವಾರ ತಡ ರಾತ್ರಿ ನಡೆದಿದೆ. ಘಟನೆಯಲ್ಲಿ ಓರ್ವನ ಎರಡು ಕೈ ಬೆರಳು ತುಂಡಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಇನೊರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಗಲಾಟೆ ಮಾಡಿಕೊಂಡ ಇಬ್ಬರು ಅರಳಿಕಟ್ಟಿ ಗ್ರಾಮದವರು ಇಬ್ಬರು ಸ್ನೇಹಿತರು ಎನ್ನಲಾಗಿದೆ. ತಡ ರಾತ್ರಿ ಕ್ಷುಲ್ಲಕ ವಿಷಯದ ಕುರಿತು ಸ್ನೇಹಿತರ ನಡುವೆ ಮಾತಿಗೆ ಮಾತು ಬೆಳೆದ ಪರಿಣಾಮ ಪರಸ್ಪರ ತಲ್ವಾರ್ ತೆಗೆದುಕೊಂಡು ಬಡಿದಾಡಿಕೊಂಡಿದ್ದಾರೆ. ಘಟನೆಯಲ್ಲಿ ಓರ್ವನ ಎರಡೂ ಕೈ ಬೆರಳು ತುಂಡಾಗಿದ್ದು ಇನ್ನೊರ್ವನ ಮುಖ ಹಾಗೂ ಕೈಗಳಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಧಾರವಾಡ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಭರಮನಿ ಹಾಗೂ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ಸ್‌ಪೆಕ್ಟರ್ ಮುರುಗೇಶ್ ಚೆನ್ನಣ್ಣನವರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಲಾಟೆಗೆ ನಿಖರ ಕಾರಣ ಪೋಲಿಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa