ಕೊಪ್ಪಳ, 9 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕೇಂದ್ರ ಕಚೇರಿಯಿಂದ 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆಯಡಿ ಪರಿಶಿಷ್ಟ ಜಾತಿ ಯುವಜನರಿಗೆ ವಿವಿಧ ತರಬೇತಿ ಶಿಬಿರಗಳನ್ನು ಆಯೋಜಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಯುವಜನರಿಗೆ ಪೂರಕವಾದ ಉದ್ಯೋಗಗಳ ವಿಫುಲ ಅವಕಾಶಗಳಿದ್ದು, ಅದರಂತೆ ಪರಿಶಿಷ್ಟ ಜಾತಿ ಯುವಜನರಿಗೆ ವಿವಿಧ ತರಬೇತಿ ಶಿಬಿರವನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕೇಂದ್ರ ಕಚೇರಿಯಿಂದ ಅನುಷ್ಠಾನಗೊಳಿಸಲಾಗುತ್ತಿದೆ.
18 ರಿಂದ 40 ವರ್ಷ ವಯೋಮಿತಿಯ ಎಸ್.ಎಸ್.ಎಲ್.ಸಿ (ಪಾಸ್ ಅಥವಾ ಫೇಲ್) ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 03 ರವರೆಗೆ 15 ದಿನಗಳ ಜಿಮ್/ಫಿಟ್ನೆಸ್ ತರಬೇತಿಯನ್ನು ಬೆಂಗಳೂರಿನ ಕಸ್ತೂರ ಬಾ ರಸ್ತೆಯ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಶಿಬಿರ ಆಯೋಜಿಸಿದೆ ಮತ್ತು
ಎಸ್.ಎಸ್.ಎಲ್.ಸಿ (ಪಾಸ್ ಅಥವಾ ಫೇಲ್) ವಿದ್ಯಾರ್ಹತೆ ಹೊಂದಿರುವ ಮಹಿಳಾ ಅಭ್ಯರ್ಥಿಗಳಿಗೆ ಸೆಪ್ಟೆಂಬರ್ 21 ರಿಂದ ಅಕ್ಟೋಬರ್ 03 ರವರೆಗೆ 13 ದಿನಗಳ ಬ್ಯೂಟಿಷಿಯನ್ ತರಬೇತಿ, ಅಕ್ಟೋಬರ್ 04 ರಿಂದ ಅಕ್ಟೋಬರ್ 09 ರವರೆಗೆ 06 ದಿನಗಳ ಚಾಟ್ಸ್ ತಯಾರಿಕೆ ಶಿಬಿರ ತರಬೇತಿಗಳನ್ನು ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ಶಿಬಿರವನ್ನು ಆಯೋಜಿಸಿದೆ.
ಯುವಜನರನ್ನು ಸ್ವಾವಲಂಬಿಯಾಗಲು ಉತ್ತೇಜಿಸುವ ದೃಷ್ಠಿಯಿಂದ ವಿವಿಧ ತರಬೇತಿ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದ್ದು, ಈ ತರಬೇತಿ ಶಿಬಿರಗಳಿಗೆ ಹಾಜರಾಗಲು ಆಸಕ್ತ ಅಭ್ಯರ್ಥಿಗಳು ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಕೊಪ್ಪಳ ಕಚೇರಿಯಲ್ಲಿ ಅರ್ಜಿಯನ್ನು ಸ್ವೀಕರಿಸಿ, ಭರ್ತಿ ಮಾಡಿ ಪೂರಕ ದಾಖಲೆಗಳೊಂದಿಗೆ ಸೆಪ್ಟಂಬರ್ 15ರ ಸಾಯಂಕಾಲ 5.30ರೊಳಗಾಗಿ (ಕಚೇರಿ ಅವಧಿಯೊಳಗೆ) ಸಲ್ಲಿಸಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್