ನವದೆಹಲಿ,10 ಜನವರಿ (ಹಿ.ಸ.) :
ಆ್ಯಂಕರ್ :
ಮುಂದಿನ ತಿಂಗಳು ಬೆಂಗಳೂರಿನಲ್ಲಿ ನಡೆಯಲಿರುವ ಏರೋ ಇಂಡಿಯಾ ೨೦೨೫ರ ಪೂರ್ವಭಾವಿಯಾಗಿ ನವದೆಹಲಿಯಲ್ಲಿಂದು ದುಂಡುಮೇಜಿನ ಸಭೆ ಆರಂಭಗೊಂಡಿದೆ.
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಹಿರಿಯ ಅಧಿಕಾರಿಗಳ ಹಾಗೂ ರಾಯಭಾರಿಗಳ ದುಂಡುಮೇಜಿನ ಸಭೆಯ ಅಧ್ಯಕ್ಷತೆ ವಹಿಸಿಕೊಂಡಿದ್ದಾರೆ.
ಕೇಂದ್ರ ರಕ್ಷಣಾ ಸಚಿವಾಲಯ ೧೫೦ಕ್ಕೂ ಹೆಚ್ಚು ಮಿತ್ರ ರಾಷ್ಟ್ರಗಳ ರಾಯಭಾರಿಗಳಿಗೆ ಸಭೆಯಲ್ಲಿ ಪಾಲ್ಗೊಳ್ಳುವಂತೆ ಆಹ್ವಾನಿಸಿದೆ. ಏಷ್ಯಾದ ಅತಿ ದೊಡ್ಡ ಏರ್ ಶೋ ಆಗಿರುವ ಏರೋ ಇಂಡಿಯಾದ ೧೫ನೇ ಆವೃತ್ತಿ ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಫೆಬ್ರವರಿ ೧೦ ರಿಂದ ೧೪ರವರೆಗೆ ನಡೆಯಲಿದೆ.
---------------
ಹಿಂದೂಸ್ತಾನ್ ಸಮಾಚಾರ್ / Dr. Vara Prasada Rao PV