ಬೆಂಗಳೂರು, 13 ಜನವರಿ (ಹಿ.ಸ.) :
ಆ್ಯಂಕರ್ : ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕನಗರದಲ್ಲಿ ಹಸುಗಳ ಕೆಚ್ಚಲು ಕತ್ತರಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ. ಸೈಯದ್ ನಸ್ರು ಬಂಧಿತ ಆರೋಪಿ.
ಬಿಹಾರದ ಚಂಪಾರಣ್ ಆರೋಪಿ ಸೈಯದ್ ನಸ್ರು, ಕೃತ್ಯ ನಡೆದ ಸ್ಥಳದಲ್ಲಿರುವ ಪ್ಲಾಸ್ಟಿಕ್, ಬಟ್ಟೆ ಹೊಲಿಯುವ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು ಎಂದು ತಿಳಿದು ಬಂದಿದೆ.
ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿರುವುದಾಗಿ ಆರೋಪಿ ಸೈಯದ್ ನಸ್ರು ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿರುವುದಾಗಿ ಪೋಲಿಸ ಮೂಲಗಳು ತಿಳಿಸಿವೆ.
ಪೊಲೀಸರು ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಜನವರಿ 24ರವರೆಗೆ ಆರೋಪಿಯನ್ನು ನ್ಯಾಯಾಂಗ ವಶಕ್ಕೆ ನೀಡಿ ಆದೇಶ ಹೊರಡಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa