ಮಹಾ ಕುಂಭಮೇಳಕ್ಕೆ ಶುಭ ಕೋರಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ನವದೆಹಲಿ, 13ಜನವರಿ (ಹಿ.ಸ.) : ಆ್ಯಂಕರ್ : ಪ್ರಯಾಗ್‌ರಾಜ್ ನಲ್ಲಿ ಇಂದಿನಿಂದ ಆರಂಭವಾದ ಮಹಾಕುಂಭ ಮೇಳಕ್ಕೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಭ ಹಾರೈಸಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು ಇದು ಭಾರತದ ಆಧ್ಯಾತ್ಮಿಕ ಮತ್ತು ಸಾಂ
ಮಲ್ಲಿಕಾರ್ಜುನ ಖರ್ಗೆ


ನವದೆಹಲಿ, 13ಜನವರಿ (ಹಿ.ಸ.) :

ಆ್ಯಂಕರ್ :

ಪ್ರಯಾಗ್‌ರಾಜ್ ನಲ್ಲಿ ಇಂದಿನಿಂದ ಆರಂಭವಾದ ಮಹಾಕುಂಭ ಮೇಳಕ್ಕೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಭ ಹಾರೈಸಿದ್ದಾರೆ.

ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು

ಇದು ಭಾರತದ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಹಬ್ಬವಾಗಿದೆ. ಈ ಶುಭ ಸಂದರ್ಭದಲ್ಲಿ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪರವಾಗಿ, ನಾನು ಎಲ್ಲಾ ದೇಶವಾಸಿಗಳಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಮುಂದಿನ ಒಂದೂವರೆ ತಿಂಗಳ ಕಾಲ ನಡೆಯಲಿರುವ ಈ ಸಾಂಪ್ರದಾಯಿಕ ಉತ್ಸವವಾದ ತ್ರಿವೇಣಿ ಸಂಗಮಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಬಂದಿರುವ ಎಲ್ಲಾ ಋಷಿಗಳು, ಸಂತರು, ಹಲವು ಸಮುದಾಯಗಳು ಮತ್ತು ಸಾಮಾನ್ಯ ಜನರು ಒಗ್ಗೂಡಿ ಭಾರತದ ಶ್ರೇಷ್ಠ ಸಂಸ್ಕೃತಿಯನ್ನು ಉತ್ತೇಜಿಸಲಿದ್ದಾರೆ ಎಂದಿರುವ ಅವರು ಆಧ್ಯಾತ್ಮಿಕತೆ, ಭಕ್ತಿ, ನಂಬಿಕೆಯ ಇತಿಹಾಸ ಹೊಂದಿರುವ ಈ ಐತಿಹಾಸಿಕ ಮಹಾಕುಂಭ ಮೇಳವು ಯಶಸ್ವಿಯಾಗಬೇಕು ಮತ್ತು ಸಮಾನತೆ ಮತ್ತು ಏಕತೆಯ ಸಂಕೇತವಾಗಬೇಕು ಎಂಬುದು ನಮ್ಮ ಆಶಯ ಎಂದು ಖರ್ಗೆ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Dr. Vara Prasada Rao PV


 rajesh pande