ಕೋಲಾರದಲ್ಲಿ ಜನವರಿ ೧೬ ರಂದು ಜಿಲ್ಲಾ ಮಟ್ಟದ ಸಿರಿಧಾನ್ಯ ಮೇಳ
ಕೋಲಾರದಲ್ಲಿ ಜನವರಿ ೧೬ ರಂದು ಜಿಲ್ಲಾ ಮಟ್ಟದ ಸಿರಿಧಾನ್ಯ ಮೇಳ
ಕೋಲಾರದಲ್ಲಿ ಜನವರಿ ೧೬ ರಂದು ಜಿಲ್ಲಾ ಮಟ್ಟದ ಸಿರಿಧಾನ್ಯ ಮೇಳ


ಕೋಲಾರ, ೧೩ ಜನವರಿ (ಹಿ.ಸ) :

ಆ್ಯಂಕರ್ : ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ ಜನವರಿ ೧೬ ರಿಂದ ೧೮ರ ವರೆಗೆ ಹಳೇ ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ-೨೦೨೫ ಕಾರ್ಯಕ್ರಮವನ್ನು ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಕೃಷಿಕ ಸಮಾಜದವರ ಸಹಯೋಗದಲ್ಲಿ ಆಯೋಜಿಸಲಾಗಿರುತ್ತದೆ.

ಕಾರ್ಯಕ್ರಮದಲ್ಲಿ ಕೃಷಿ ವಸ್ತು ಪ್ರದರ್ಶನ, ಫಲಪುಷ್ಪ ಪ್ರದರ್ಶನ, ತಾಂತ್ರಿಕ ಕಾರ್ಯಾಗಾರಗಳು ಹಾಗೂ ಇತರೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮವನ್ನು ಮಾನ್ಯ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಸ್.ಸುರೇಶ್ ರವರು ಉದ್ಘಾಟಿಸಲಿದ್ದು, ಜಿಲ್ಲೆಯ ಸಮಸ್ಥ ನಾಗರೀಕರು ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande