ರಾಷ್ಟಿಯ ಮಟ್ಟದ ಕುಸ್ತಿ ಪಂದ್ಯಾವಳಿಗೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರ ಆಯ್ಕೆ
ರಾಷ್ಟಿಯ ಮಟ್ಟದ ಕುಸ್ತಿ ಪಂದ್ಯಾವಳಿಗೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರ ಆಯ್ಕೆ
ಪಂಜಾಬ್‌ನಲ್ಲಿ ನಡೆಯಲಿರುವ ಅಖಿಲಭಾರತ ಅಂತರ ವಿಶ್ವವಿದ್ಯಾಲಯಗಳ ಮಹಿಳೆಯರ ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿರುವ ಕೋಲಾರದ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ಭಾಗವಹಿಸಲಿದ್ದಾರೆ.


ಕೋಲಾರ, ೧೩ ಜನವರಿ (ಹಿ.ಸ) :

ಆ್ಯಂಕರ್ : ರಾಷ್ಟçಮಟ್ಟದ ಕುಸ್ತಿ ಸ್ಪರ್ಧೆಗಳಿಗೆ ನಗರದ ಸರ್ಕಾರಿ ಮಹಿಳಾ ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದು, ಪಂಜಾಬ್ ರಾಜ್ಯದ ಗುರುಕಾಶಿ ವಿಶ್ವವಿದ್ಯಾಲಯದಲ್ಲಿ ಜ.೧೪ ರಿಂದ ೧೭ ರವರೆಗೂ ನಡೆಯುವ ಅಖಿಲಭಾರತ ಅಂತರ ವಿಶ್ವವಿದ್ಯಾಲಯಗಳ ಮಹಿಳೆಯರ ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಸುಬ್ರಮಣಿ ಎನ್ ತಿಳಿಸಿದ್ದಾರೆ.

ರಾಷ್ಟçಮಟ್ಟಕ್ಕೆ ಆಯ್ಕೆಯಾಗಿರುವ ದ್ವಿತಿಯ ಬಿಎ ವಿದ್ಯಾರ್ಥಿನಿ ಆರ್.ನಂದುಶ್ರೀ, ದ್ವಿತೀಯ ಬಿಬಿಎ ತರಗತಿಯ ಗೀತಾಶ್ರೀ, ತೃತೀಯ ಬಿಕಾಂನ ಟಿ.ಎನ್.ಗೌತಮಿ, ಪ್ರಥಮ ಬಿಬಿಎ ತರಗತಿಯ ಟಿ.ಎಸ್.ಸೇವಂತಿ ಈ ನಾಲ್ವರೂ ಸಹಾ ತೊರದೇವಂಡಹಳ್ಳಿ ಗ್ರಾಮದವರಾಗಿರುವುದು ವಿಶೇಷವಾಗಿದೆ.

ಅಖಿಲಭಾರತ ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಈ ವಿದ್ಯಾರ್ಥಿನಿಯರು ಬೆಂಗಳೂರು ಉತ್ತರ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸುತ್ತಿದ್ದು, ಕಾಲೇಜಿನ ಪ್ರಾಂಶುಪಾಲ ಡಾ.ಗಂಗಾಧರರಾವ್, ದೈಹಿಕ ಶಿಕ್ಷಣ ನಿರ್ದೇಶಕ ಡಾ.ಸುಬ್ರಮಣಿ ಎನ್, ಕ್ರೀಡಾ ಸಮಿತಿಯ ಸದಸ್ಯರು, ಕಾಲೇಜಿನ ಬೋಧಕ,ಬೋಧಕೇತರ ಸಿಬ್ಬಂದಿ ವಿದ್ಯಾರ್ಥಿನಿಯರಿಗೆ ಶುಭ ಕೋರಿದ್ದಾರೆ.

ಚಿತ್ರ : ಪಂಜಾಬ್‌ನಲ್ಲಿ ನಡೆಯಲಿರುವ ಅಖಿಲಭಾರತ ಅಂತರ ವಿಶ್ವವಿದ್ಯಾಲಯಗಳ ಮಹಿಳೆಯರ ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿರುವ ಕೋಲಾರದ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ಭಾಗವಹಿಸಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande