ನವದೆಹಲಿ,13 ಜನವರಿ (ಹಿ.ಸ.) :
ಆ್ಯಂಕರ್ :
ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಹಾಗೂ ಡೈರಿ ಖಾತೆ ಸಚಿವ ರಾಜೀವ್ ರಂಜನ್ ಸಿಂಗ್ ಅವರು ಇಂದು ಪುಣೆಯಲ್ಲಿ ಬೃಹತ್ ಉದ್ಯಮಶೀಲತಾ ಅಭಿವೃದ್ಧಿ ಸಮಾವೇಶ ಉದ್ಘಾಟಿಸಲಿದ್ದಾರೆ.
ಸುಮಾರು ೫೪೫ ಕೋಟಿ ರೂಪಾಯಿ ವೆಚ್ಚದ ೪೦ ಜಾನುವಾರು ಯೋಜನೆಗಳನ್ನು ಸಚಿವರು ಉದ್ಘಾಟಿಸಲಿದ್ದಾರೆ. ಪಶುಸಂಗೋಪನೆ ಕ್ಷೇತ್ರದ ಸಾಮರ್ಥ್ಯವನ್ನು ಬಳಸಿಕೊಳ್ಳುವಂತಾಗಲು ನೀತಿ ನಿರೂಪಕರು, ಒಕ್ಕೂಟಗಳು, ಸಹಕಾರಿಗಳು, ಉದ್ಯಮಶೀಲರು, ಔಧ್ಯಮಿಕ ಸಂಘಟನೆಗಳು ಹಾಗೂ ಹಣಕಾಸು ಸಂಸ್ಥೆಗಳನ್ನು ಒಂದೇ ವೇದಿಕೆಯಲ್ಲಿ ತರುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / Dr. Vara Prasada Rao PV