ಹುಬ್ಬಳ್ಳಿ, 14 ಜನವರಿ (ಹಿ.ಸ.) :
ಆ್ಯಂಕರ್ : ಮಕ್ಕಳು ಕಲಿಕೆಯ ಜೊತೆಗೆ ಸಾಂಸ್ಕೃತಿಕ ಮೌಲ್ಯಗಳನ್ನು ಅಳವಡಿಸಿಕೊಂಡು ದೇಶದ ಪ್ರಗತಿಗೆ ಕೊಡುಗೆ ನೀಡಬೇಕು ವಿದ್ಯಾರ್ಥಿಗಳ ಜೀವನ ಅಮೂಲ್ಯವಾಗಿದ್ದು, ಅದನ್ನು ಸರಿಯಾಗಿ ಬಳಸಬೇಕು ಎಂದು ಸ್ವರ್ಣ ಸಮೂಹ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ವಿಎಸ್ ವಿ ಪ್ರಸಾದ ಕರೆ ನೀಡಿದರು.
ಹುಬ್ಬಳ್ಳಿ ಭೈರಿದೇವರಕೊಪ್ಪದಲ್ಲಿರುವ ಶ್ರೀ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಜಾನಪದ ಪರಿಕಲ್ಪನೆಯೊಂದಿಗೆ ನಡೆದ ವಾರ್ಷಿಕೋತ್ಸವ ಮತ್ತು ಶ್ರೀ ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ವಿದ್ಯಾರ್ಥಿಗಳು ತಮ್ಮ ಸಮಯವನ್ನು ಕಲಿಕೆ, ಸ್ವವಿಕಾಸ, ಹಾಗೂ ಉತ್ತಮ ಭವಿಷ್ಯದ ನಿರ್ಮಾಣಕ್ಕಾಗಿ ಶ್ರೇಷ್ಠವಾಗಿ ಬಳಸಲು ಪ್ರೇರಿತರಾಗಬೇಕು. ಅಧ್ಯಯನ, ಹವ್ಯಾಸಗಳು ಮತ್ತು ವಿಶ್ರಾಂತಿ ನಡುವಿನ ಸಮತೋಲನವನ್ನು ಸಾಧಿಸಲು ಪ್ರಯತ್ನಿಸಬೇಕು ಎಂದು ಹೇಳಿದರು.
ಜಾನಪದ ಪರಿಕಲ್ಪನೆಯ ಈ ಕಾರ್ಯಕ್ರಮಕ್ಕೆ ಪೂರಕವಾಗಿ ಹಲವು ಪಾಲಕರು ಉತ್ತರ ಕರ್ನಾಟಕದ ಪಾರಂಪರಿಕ ಉಡುಪು ಧರಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಹಾಗು ವಿದ್ಯಾರ್ಥಿಗಳು ಜಾನಪದ ಗೀತೆಗಳನ್ನು ಆಧರಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ಪ್ರದರ್ಶಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa