ಬೆಂಗಳೂರು, 14 ಜನವರಿ (ಹಿ.ಸ.) :
ಆ್ಯಂಕರ್ : ಬೆಂಗಳೂರಿನ ಹೃದಯ ಭಾಗದಲ್ಲಿರುವ ಕರ್ನಾಟಕದ ಮೊದಲನೇ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಶ್ರೀ ಜಯಚಾಮರಾಜೇಂದ್ರ ಪಾಲಿಟೆಕ್ನಿಕ್ ಕಾಲೇಜಿಗೆ ಸಚಿವ ಎಂ.ಸಿ.ಸುಧಾಕರ ಭೇಟಿ ನೀಡಿದರು.
ಹಳೆಯ ಪಾರಂಪರಿಕ ಕಟ್ಟಡ ವಿನ್ಯಾಸ ಯುವ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ನಿರ್ವಹಣೆ ಸೇರಿದಂತೆ ನೂತನ ಕಟ್ಟಡ ನಿರ್ಮಾಣಕ್ಕೆ ಯೋಜನಾ ವರದಿ ವೀಕ್ಷಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿರ್ದೇಶಕರಾದ ಪ್ರಸನ್ನ ರವರು ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa