ನವದೆಹಲಿ,14 ಜನವರಿ (ಹಿ.ಸ.) :
ಆ್ಯಂಕರ್ :ಪ್ರಸಕ್ತ ಹಣಕಾಸು ವರ್ಷದಲ್ಲಿ ದೇಶದ ನಿವ್ವಳ ನೇರ ತೆರಿಗೆ ಸಂಗ್ರಹವು ಶೇಕಡ ೧೬ ರಷ್ಟು ಏರಿಕೆಯಾಗಿ ಸುಮಾರು ೧೬ ಲಕ್ಷ ೯೦ ಸಾವಿರ ಕೋಟಿ ರೂಪಾಯಿಗೆ ತಲುಪಿದೆ.
ಕೇಂದ್ರೀಯ ನೇರ ತೆರಿಗೆ ಮಂಡಳಿಯ ಪ್ರಕಾರ, ಒಟ್ಟು ನೇರ ತೆರಿಗೆ ಸಂಗ್ರಹವು ಶೇಕಡ ೨೦ ರಷ್ಟು ಬೆಳವಣಿಗೆ ಸಾಧಿಸಿದೆ. ಕಳೆದ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಸಂಗ್ರಹಿಸಿದ ಸುಮಾರು ೧೭ ಲಕ್ಷ ಕೋಟಿ ರೂಪಾಯಿಗಳಿಗಿಂತ ಇದು ಗಮನಾರ್ಹ ಹೆಚ್ಚಳವಾಗಿದೆ.
ಕಾರ್ಪೊರೇಟ್ ತೆರಿಗೆ ಸುಮಾರು ಹತ್ತು ಲಕ್ಷ ಕೋಟಿ ರೂಪಾಯಿ ಕಾರ್ಪೊರೇಟ್ ಅಲ್ಲದ ತೆರಿಗೆ ಸುಮಾರು ೧೧ ಲಕ್ಷ ಕೋಟಿ ರೂಪಾಯಿ ಸಂಗ್ರಹವಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / Dr. Vara Prasada Rao PV