ಕಾರವಾರ, 14 ಜನವರಿ (ಹಿ.ಸ.) :
ಆ್ಯಂಕರ್ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಹಾಗು ಅವರ ಸೋದರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಸಂಗತಿ ಕಳವಳಕಾರಿಯಾಗಿದೆ.
ಸದ್ಯ ಅವರು ಅಪಾಯದಿಂದ ಪಾರಾಗಿದ್ದಾರೆ.
ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹೆಬ್ಬಾಳ್ಕರ್ ಹಾಗೂ ಅವರ ಸಹೋದರ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಸಚಿವ ಮಂಕಾಳ ವೈದ್ಯ ಸಾಮಾಜಿಕ ಜಾಲತಾಣದಲ್ಲಿ ಹಾರೈಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa