ಹುಬ್ಬಳ್ಳಿ, 14 ಜನವರಿ (ಹಿ.ಸ.) :
ಆ್ಯಂಕರ್ : ಬೆಂಗಳೂರಿನಲ್ಲಿ ಗೋವುಗಳ ಮೇಲೆ ನಡೆದಂತಹ ಪೈಶಾಚಿಕ ಕೃತ್ಯವನ್ನು ಖಂಡಿಸಿ ಹುಬ್ಬಳ್ಳಿಯ ಸಮಸ್ತ ಗೋ-ಭಕ್ತ ಪರಿವಾರ ವತಿಯಿಂದ ಬುಧವಾರ ಮೂರು ಸಾವಿರ ಮಠದ ಶ್ರೀ ಜಗದ್ಗುರು ರಾಜಯೋಗೇಂದ್ರ ಮಹಾಸ್ವಾಮಿಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲು ತಿರ್ಮಾನಿಸಿದೆ.
ನಾಳೆ ಸಂಜೆ ಮೂರು ಸಾವಿರ ಮಠದ ಮೈದಾನದಿಂದ ದಾಜೀಬಾನ ಪೇಟ, ಗೌಳಿಗಲ್ಲಿ ಮುಖಾಂತರ ಸಂಗೊಳ್ಳಿ ರಾಯಣ್ಣ ಸರ್ಕಲ್‌ದಿಂದ ಕಿತ್ತೂರ ರಾಣಿ ಚೆನ್ನಮ್ಮ ಸರ್ಕಲಗೆ ಆಗಮಿಸಿ, ರಾಣಿಚೆನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa