ಮೈಸೂರು,14 ಜನವರಿ (ಹಿ.ಸ.) :
ಆ್ಯಂಕರ್ :ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಖಾಸಗಿ ತೋಟದ ಮನೆಯಲ್ಲಿ ಮಕರ ಸಂಕ್ರಾಂತಿ ಸುಗ್ಗಿ ಹಬ್ಬದ ಸಂಭ್ರಮ ಮನೆ ಮಾಡಿದೆ.
ಸಂಕ್ರಾಂತಿ ಹಿನ್ನೆಲೆಯಲ್ಲಿ ಮೈಸೂರಿನ ತಿ.ನರಸೀಪುರ ರಸ್ತೆಯಲ್ಲಿರುವ ತೂಗುದೀಪ ಫಾರ್ಮ್ ಹೌಸ್ ನಲ್ಲಿ ತಂಗಿರುವ ನಟ ದರ್ಶನ್, ತಮ್ಮ ಕುಟುಂಬ, ಸ್ನೇಹಿತರು ಹಾಗೂ ಆಪ್ತರೊಂದಿಗೆ ಬೆರೆತು ಬೆಳಿಗ್ಗೆವಿಶೇಷ ಪೂಜೆಸಲ್ಲಿಸಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿ ಹಸುಗಳನ್ನು ಸಿಂಗಾರಗೊಳಿಸಿ ವಿಶೇಷ ಪೂಜೆ ಸಲ್ಲಿಸುವ ಜತೆಗೆ ಸಂಜೆ ವೇಳೆ ಬೆಂಕಿ ಕಿಚ್ಚು ಹಾಯಿಸುವುದು ವಾಡಿಕೆ. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಅವರ ಫಾರ್ಮ್ ಹೌಸ್‌ನಲ್ಲಿ ಪ್ರತಿ ವರ್ಷವು ಸಹ ಜಾನುವಾರುಗಳ ಕಿಚ್ಚು ಹಾಯಿಸುವ ಮೂಲಕ ಸಂಕ್ರಾಂತಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸುತ್ತಾರೆ. ಹೀಗಾಗಿ ಇಂದು
ತೋಟದಮನೆಯಲ್ಲಿ ನಟ ದರ್ಶನ್ ಸಾಕು ಪ್ರಾಣಿಗಳಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಹಸುಗಳಿಗೆ ನಟ ದರ್ಶನ್ ತೋಟದಲ್ಲೇ ಕಿಚ್ಚು ಹಾಯಿಸಲಿದ್ದಾರೆ. ಅದಕ್ಕಾಗಿ ಭರ್ಜರಿ ತಯಾರಿ ನಡೆದಿದೆ. ತಮ್ಮ ತೋಟದಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರಿಗೂ ಹಬ್ಬದೂಟ ಏರ್ಪಾಡು ಮಾಡಲಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / Dr. Vara Prasada Rao PV