ದೇವಿಗೆ ಉಡಿ ತುಂಬುವ ಕಾರ್ಯಕ್ರಮ
ಕೊಪ್ಪಳ , 15 ಜನವರಿ (ಹಿ.ಸ.) : ಆ್ಯಂಕರ್ : ಮಂಗಳವಾರ ಸಂಜೆ 5.00 ಘಂಟೆಗೆ ಕೈಲಾಸ ಮಂಟಪದಲ್ಲಿರುವ ಅನ್ನಪೂರ್ಣೇಶ್ವರಿ ಗುಡಿ ದೇವಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಿತು. ಶ್ರೀ ಗವಿಮಠದ ಜಾತ್ರೆಯ ಅಂಗವಾಗಿ ಜಾತ್ರೆಯ ಮುನ್ನ ಪ್ರತಿ ವರ್ಷ ಶ್ರೀ ಅನ್ನಪೂರ್ಣೇಶ್ವರಿ ದೇವಿಗೆ ಉಡಿತುಂಬುವ ಕಾರ್ಯಕ್ರಮವು ಸಾಯ
ದೇವಿಗೆ ಉಡಿ ತುಂಬುವ ಕಾರ್ಯಕ್ರಮ


ಕೊಪ್ಪಳ , 15 ಜನವರಿ (ಹಿ.ಸ.) :

ಆ್ಯಂಕರ್ : ಮಂಗಳವಾರ ಸಂಜೆ 5.00 ಘಂಟೆಗೆ ಕೈಲಾಸ ಮಂಟಪದಲ್ಲಿರುವ ಅನ್ನಪೂರ್ಣೇಶ್ವರಿ ಗುಡಿ ದೇವಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಿತು.

ಶ್ರೀ ಗವಿಮಠದ ಜಾತ್ರೆಯ ಅಂಗವಾಗಿ ಜಾತ್ರೆಯ ಮುನ್ನ ಪ್ರತಿ ವರ್ಷ ಶ್ರೀ ಅನ್ನಪೂರ್ಣೇಶ್ವರಿ ದೇವಿಗೆ ಉಡಿತುಂಬುವ ಕಾರ್ಯಕ್ರಮವು ಸಾಯಂಕಾಲ ನಡೆಯಿತು.

ಕಾರ್ಯಕ್ರಮದಲ್ಲಿ ಗವಿಮಠದ ಬೆಟ್ಟದ ಮೇಲಿರುವ ಶ್ರೀ ಅನ್ನಪೂರ್ಣೆಶ್ವರಿದೇವಿಗೆ ಉಡಿತುಂಬುವ ಕಾರ್ಯದಲ್ಲಿ ಎಲ್ಲತಾಯಂದಿರು ಸಕ್ರೀಯವಾಗಿ ಭಾಗವಹಿಸಿದರು .ಶ್ರೀ ಅನ್ನಪೂರ್ಣೆಶ್ವರಿ ದೇವಿಗೆ ಬಾಳೆಕಂಬ, ತೆಂಗಿನಗರಿ, ಕಬ್ಬಿನ ಹಂದರ ಹಾಕಿರುತ್ತಾರೆ. ಹೋಳಿಗೆ ಸಜ್ಜಕದ ನೈವೇದ್ಯವಾಗುತ್ತದೆ. ಆಗಮಿಸಿದ ಎಲ್ಲತಾಯಂದಿರಿಗೂ ಮಂಗಳಕರವಾದ ಬಾಗೀನ ಕೊಡುವ ಮೂಲಕ ಉಡಿತುಂಬುವ ಕಾಯಕವನ್ನು ಪರಸ್ಪರರು ನಡೆಸಿಕೊಂಡರು.

ಅಷ್ಟೊತ್ತಿಗೆ ಪೂಜ್ಯ ಶಿವಯೋಗಿಗಳವರ ಲಿಂಗ ಪಾದೋದಕ ಬರುವುದು.ಅದನ್ನು ಸಿಂಪಡಿಸಿದ ನಂತರ ಅನ್ನ ಸಂತರ್ಪಣೆ ನಡೆಯಿತು. ಕೊಪ್ಪಳ ಹಾಗೂ ಸುತ್ತಲಿನ ಸಹಸ್ರಾರು ಮಹಿಳೆಯರು ಇದರಲ್ಲಿ ಭಾಗವಹಿಸಿದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande