ಗೋವುಗಳ ಕೆಚ್ಚಲು ಕತ್ತರಿಸಿದ ಪ್ರಕರಣ: ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ-ಡಾ. ಜಿ ಪರಮೇಶ್ವರ್ 
ಬೆಂಗಳೂರು, 15 ಜನವರಿ (ಹಿ.ಸ.) : ಆ್ಯಂಕರ್ : ಗೋವಿನ ಕೆಚ್ಚಲನ್ನೆ ಕತ್ತರಿಸುವ ದುಷ್ಕೃತ್ಯ ನಡೆದು ಹೋಗಿದೆ. ಇಂತಹ ಘಟನೆಗಳು ನಡೆಯಬಾರದು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರಿಗೆ ವಿಷ
ಡಾ. ಜಿ. ಪರಮೇಶ್ವರ್


ಬೆಂಗಳೂರು, 15 ಜನವರಿ (ಹಿ.ಸ.) :

ಆ್ಯಂಕರ್ :

ಗೋವಿನ ಕೆಚ್ಚಲನ್ನೆ ಕತ್ತರಿಸುವ ದುಷ್ಕೃತ್ಯ ನಡೆದು ಹೋಗಿದೆ. ಇಂತಹ ಘಟನೆಗಳು ನಡೆಯಬಾರದು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರಿಗೆ ವಿಷಯ ತಿಳಿಸಿದ ಅವರು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರೋಪಿಯೊಬ್ಬನನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗಿದೆ. ಪ್ರಕರಣದಲ್ಲಿ ಬೇರೆಯವರ ಕೈವಾಡ ಇರುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Dr. Vara Prasada Rao PV


 rajesh pande