ಬೆಂಗಳೂರು, 15 ಜನವರಿ (ಹಿ.ಸ.) :
ಆ್ಯಂಕರ್ :ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಜೈವಿಕ ನಾವೀನ್ಯತೆ ಕೇಂದ್ರದಲ್ಲಿ ಅಗ್ನಿ ಅವಘಡ ಸಂಭವಿಸಿದ ಸ್ಥಳಕ್ಕೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ದುರ್ಘಟನೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಿಥೆನಾಲ್ ಸೋರಿಕೆಯಿಂದ ಅಗ್ನಿ ಅವಘಡ ಸಂಭವಿಸಿದೆ ಎಂಬುದು ಕಂಡು ಬಂದಿದೆ. ಒಂದು ಘಟಕ ಸಂಪೂರ್ಣವಾಗಿ ನಾಶವಾಗಿದ್ದು, ಇತರೆ ನಾವೀನ್ಯ ಕೇಂದ್ರಗಳು ಹಾನಿಗೊಳಗಾಗಿವೆ ಎಂದು ತಿಳಿಸಿದರು.
ಅಂದಾಜು ೧೦೦ ಕೋಟಿ ರೂಪಾಯಿ ಮೌಲ್ಯದ ವಸ್ತುಗಳು ಹಾನಿಯಾಗಿದೆ. ಸುಮಾರು ೬೦ ವಿವಿಧ ಕಂಪನಿಗಳು ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದು ೨೦ ಲ್ಯಾಬ್‌ಗಳಿಗೆ ಹಾನಿಯಾಗಿದೆ. ಘಟನೆ ಹೇಗೆ ಸಂಭವಿಸಿತು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸಿ, ವರದಿ ನೀಡಲಿದ್ದಾರೆ ಎಂದು ಸಚಿವರು ಸ್ಪಷ್ಟಪಡಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Dr. Vara Prasada Rao PV