ಬೆಂಗಳೂರು ಅಗ್ನಿ ಅವಘಡ ಸ್ಥಳಕ್ಕೆ ಸಚಿವ ಖರ್ಗೆ ಭೇಟಿ
ಬೆಂಗಳೂರು, 15 ಜನವರಿ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ಬಯೋಇನ್ನೋವೇಶನ್ ಸೆಂಟರ್‌ನಲ್ಲಿ ನಡೆದ ಅಗ್ನಿ ಅವಘಡ ಸ್ಥಳಕ್ಕೆ ಸಚಿವ ಪ್ರಿಯಾಂಕ ಖರ್ಗೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ ಮಾತನಾಡಿದ ಅವರು ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ನಮ್ಮ ವಿಜ್ಞಾನಿಗಳು ಹಲವಾರು
Visit


ಬೆಂಗಳೂರು, 15 ಜನವರಿ (ಹಿ.ಸ.) :

ಆ್ಯಂಕರ್ : ಬೆಂಗಳೂರಿನ ಬಯೋಇನ್ನೋವೇಶನ್ ಸೆಂಟರ್‌ನಲ್ಲಿ ನಡೆದ ಅಗ್ನಿ ಅವಘಡ ಸ್ಥಳಕ್ಕೆ ಸಚಿವ ಪ್ರಿಯಾಂಕ ಖರ್ಗೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದೇ ವೇಳೆ ಮಾತನಾಡಿದ ಅವರು ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ನಮ್ಮ ವಿಜ್ಞಾನಿಗಳು ಹಲವಾರು ವರ್ಷಗಳ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯು ಹೀಗೆ ಸುಟ್ಟು ಬೂದಿಯಾಗಿರುವುದನ್ನು ನೋಡುವಾಗ ಹೃದಯಕಲಕುತ್ತದೆ. ಈ ದುರ್ಘಟನೆಯಿಂದ ಪುಟಿದೆದ್ದು ಬರಲು ಹಾಗು ಮರುನಿರ್ಮಾಣ ಮಾಡಲು ನಮ್ಮ ಸರ್ಕಾರವು ಅವರ ಬೆಂಬಲಕ್ಕೆ ನಿಂತು ಎಲ್ಲಾ ಅಗತ್ಯ ನೆರವನ್ನು ನೀಡಲಿದೆ ಎಂದು ಭರವಸೆ ನೀಡಿದರು.

ಈ ದುರದೃಷ್ಟಕರ ಘಟನೆ ಸಂದರ್ಭದಲ್ಲಿ ತಕ್ಷಣ ಸ್ಪಂದಿಸಿ ನೆರವಾದ ಗೃಹ ಇಲಾಖೆಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ವಿಭಾಗಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande