ಬೆಳೆ ಸ್ಪರ್ಧೆಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಮರು ಅವಕಾಶ
ಕೊಪ್ಪಳ, 15 ಜನವರಿ (ಹಿ.ಸ.) : ಆ್ಯಂಕರ್ : 2024ರ ಹಿಂಗಾರು ಹಂಗಾಮಿನಲ್ಲಿ ಆನ್‍ಲೈನ್ ಮೂಲಕ ಕಡಿಮೆ ಅರ್ಜಿಗಳು ಸ್ವಿಕೃತವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಅನುಕೂಲವಾಗುವಂತೆ 2024-25ನೇ ಸಾಲಿನ ಕೃಷಿ ಪ್ರಶಸ್ತಿಯಡಿ ಹಿಂಗಾರು ಹಂಗಾಮಿನ ಬೆಳೆ ಸ್ಪರ್ಧೆಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ: 202
ಬೆಳೆ ಸ್ಪರ್ಧೆಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಮರು ಅವಕಾಶ


ಕೊಪ್ಪಳ, 15 ಜನವರಿ (ಹಿ.ಸ.) :

ಆ್ಯಂಕರ್ : 2024ರ ಹಿಂಗಾರು ಹಂಗಾಮಿನಲ್ಲಿ ಆನ್‍ಲೈನ್ ಮೂಲಕ ಕಡಿಮೆ ಅರ್ಜಿಗಳು ಸ್ವಿಕೃತವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಅನುಕೂಲವಾಗುವಂತೆ 2024-25ನೇ ಸಾಲಿನ ಕೃಷಿ ಪ್ರಶಸ್ತಿಯಡಿ ಹಿಂಗಾರು ಹಂಗಾಮಿನ ಬೆಳೆ ಸ್ಪರ್ಧೆಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ: 2025ರ ಜನೇವರಿ 20 ರವರೆಗೆ ಮತ್ತೊಂದು ಅವಕಾಶ ಕಲ್ಪಿಸಲಾಗಿದೆ.

ಈ ಅವಕಾಶವನ್ನು ರೈತರು ಸದುಪಯೋಗ ಪಡೆದುಕೊಳ್ಳಬೇಕೆಂದು ಈ ಮೂಲಕ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande