ನವದೆಹಲಿ,15 ಜನವರಿ (ಹಿ.ಸ.) :
ಆ್ಯಂಕರ್ :ಸಿಂಗಾಪುರ ಅಧ್ಯಕ್ಷ ಥರ್ಮನ್ ಷಣ್ಮುಗರತ್ನಂ ಅವರು ಐದು ದಿನಗಳ ಭಾರತ ಭೇಟಿಗಾಗಿ ನವದೆಹಲಿಗೆ ಆಗಮಿಸಿದ್ದಾರೆ.
ವಾಣಿಜ್ಯ ಮತ್ತು ಕೈಗಾರಿಕಾ ಖಾತೆ ರಾಜ್ಯ ಸಚಿವ ಜಿತಿನ್ ಪ್ರಸಾದ್ ನಿನ್ನೆ ರಾತ್ರಿ ಅವರನ್ನು ಸ್ವಾಗತಿಸಿದರು. ಸಿಂಗಾಪುರ ಅಧ್ಯಕ್ಷ ಥರ್ಮನ್ ಅವರೊಂದಿಗೆ ಸಚಿವರು, ಸಂಸತ್ ಸದಸ್ಯರು ಮತ್ತು ಅಧಿಕಾರಿಗಳು ಸೇರಿದಂತೆ ಉನ್ನತ ಮಟ್ಟದ ನಿಯೋಗ ಭಾರತಕ್ಕೆ ಭೇಟಿ ನೀಡಿದೆ.
ಸಿಂಗಾಪುರ ಅಧ್ಯಕ್ಷರಾಗಿ ಥರ್ಮನ್ ಷಣ್ಮುಗರತ್ನಂ ಅವರ ಮೊದಲ ಭಾರತ ಭೇಟಿ ಇದಾಗಿದೆ. ಇಂದು ಸಿಂಗಾಪುರ ಅಧ್ಯಕ್ಷ ಥರ್ಮನ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಲಿದ್ದು, ಅವರ ಭೇಟಿಯ ಗೌರವಾರ್ಥ ಔತಣಕೂಟವನ್ನು ಆಯೋಜಿಸಲಾಗಿದೆ.
ಬಳಿಕ ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಮತ್ತಿತರರು ಅಧ್ಯಕ್ಷ ಥರ್ಮನ್ ಅವರನ್ನು ಭೇಟಿ ಮಾಡಲಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Dr. Vara Prasada Rao PV