23 Jan 2025, 23:45 HRS IST

ಮುಖ್ಯಮಂತ್ರಿ ಕುರ್ಚಿಗೆ ಕಂಟಕ ಬಂದಾಗ ಜಾತಿ ಗಣತಿ ನೆನಪಾಗುತ್ತದೆ-ಆರ್.ಅಶೋಕ
ನವದೆಹಲಿ,15 ಜನವರಿ (ಹಿ.ಸ.) : ಆ್ಯಂಕರ್ :ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕುರ್ಚಿಗೆ ಕಂಟಕ ಬಂದಾಗ ಜಾತಿ ಗಣತಿ ನೆನಪಾಗುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ವ್ಯಂಗ್ಯವಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಜಾತಿ ಜನಗಣತಿ ಬಗ್ಗೆ ಬಿಜೆಪಿ ಪಕ್ಷಕ್ಕಾಗಲಿ ತಮಗಾಗಲಿ ಯಾವ
ಆರ್.ಅಶೋಕ


ನವದೆಹಲಿ,15 ಜನವರಿ (ಹಿ.ಸ.) :

ಆ್ಯಂಕರ್ :ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕುರ್ಚಿಗೆ ಕಂಟಕ ಬಂದಾಗ ಜಾತಿ ಗಣತಿ ನೆನಪಾಗುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ವ್ಯಂಗ್ಯವಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಜಾತಿ ಜನಗಣತಿ ಬಗ್ಗೆ ಬಿಜೆಪಿ ಪಕ್ಷಕ್ಕಾಗಲಿ ತಮಗಾಗಲಿ ಯಾವ ವಿರೋಧವೂ ಇಲ್ಲ. ಬಿಜೆಪಿಯ ಮೂಲಸಿದ್ಧಾಂತವಾದ ’ಅಂತ್ಯೋದಯ’ದ ಪರಿಕಲ್ಪನೆಯಲ್ಲೇ ತಳ ಸಮುದಾಯಗಳನ್ನ ರಾಜಕೀಯವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂಬ ಸಾಮಾಜಿಕ ನ್ಯಾಯದ ಬದ್ಧತೆ ಅಡಗಿದೆ. ಅದನ್ನ ಸಾಕಾರಗೊಳಿಸುವ ಯಾವ ಪ್ರಾಮಾಣಿಕ ಪ್ರಯತ್ನಕ್ಕಾದರೂ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ ಎಂದು ತಿಳಿಸಿದ್ದಾರೆ.

ಆದರೆ ರಾಜಕೀಯ ಚದುರಂಗದಾಟದಲ್ಲಿ ಜಾತಿ ಜನಗಣತಿಯನ್ನು ದಾಳವಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ವಿರೋಧವಿದೆ ಎಂದು ಹೇಳಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Dr. Vara Prasada Rao PV


 rajesh pande